alex Certify BIG NEWS : ರಾಜ್ಯಾದ್ಯಂತ ನಾಳೆಯಿಂದ ‘ದ್ವಿತೀಯ PUC’ ಪರೀಕ್ಷೆ ಆರಂಭ, ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯಾದ್ಯಂತ ನಾಳೆಯಿಂದ ‘ದ್ವಿತೀಯ PUC’ ಪರೀಕ್ಷೆ ಆರಂಭ, ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು : 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ನಾಳೆಯಿಂದ (ಮಾರ್ಚ್ 1 ) ರಿಂದ ಮಾ. 22ರ ವರೆಗೆ ನಡೆಯಲಿದ್ದು, ವಿದ್ಯಾರ್ಥಿಗಳು ಈ ನಿಯಮಗಳನ್ನು ಪಾಲಿಸುವುದು ಕಡ್ಡಾಯವಾಗಿದೆ.

ಈ ನಿಯಮಗಳ ಪಾಲನೆ ಕಡ್ಡಾಯ

1) ವಿದ್ಯಾರ್ಥಿಗಳು, ಸರಳ ಕ್ಯಾಲ್ಕುಲೇಟರ್ಗಳನ್ನು ಮಾತ್ರ ಬಳಸಲು ಅವಕಾಶ
2) ಸ್ಟ್ರಾಟಿಸ್ಟಿಕ್ಸ್ ವಿಷಯದಲ್ಲಿ ಮಾತ್ರ ಸೈಂಟಿಫಿಕ್ ಕ್ಯಾಲ್ಕುಲೇಟರ್ ಬಳಸಲು ಅನುಮತಿ
3) ಪರೀಕ್ಷೆಯ ಅಂತಿಮ ಬೆಲ್ ಹೊಡೆಯುವ ಮುನ್ನ ಪರೀಕ್ಷಾ ಕೊಠಡಿಯಿಂದ ಹೊರಡುವ ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆ ಮತ್ತು ಪ್ರಶ್ನೆ ಪತ್ರಿಕೆಗಳನ್ನು ಕಡ್ಡಾಯವಾಗಿ ಪಡೆಯಲಾಗುತ್ತದೆ.
4) ಗುರುತಿನ ಚೀಟಿ ಹಾಗೂ ಹಾಲ್ ಟಿಕೆಟ್ ಕಡ್ಡಾಯ
5) ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪ್ರವೇಶ ಪತ್ರ ತೋರಿಸಿ ಬಿಎಂಟಿಸಿ ಹಾಗೂ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣ ಮಾಡಬಹುದಾಗಿದೆ.
6) ಮೊಬೈಲ್ ಫೋನ್ , ಎಲೆಕ್ಟ್ರಿಕಲ್ ಉಪಕರಣಗಳ ಬಳಕೆ ನಿಷೇಧ
7) ಪರೀಕ್ಷಾ ಅವಧಿಗಿಂತ ಮುಂಚೆ ಹೊರಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡಲಾಗುವುದಿಲ್ಲ.

2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಇನ್ನು ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

ಪರೀಕ್ಷೆಗಳು ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯವಾಗಲಿವೆ.
01-03-2024 : ಶುಕ್ರವಾರ ಕನ್ನಡ ಹಾಗೂ ಅರೇಬಿಕ್
04-03-2024 : ಸೋಮವಾರ ಗಣಿತ
05-03-2024 : ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ
06-03-2024 : ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್ ಪರೀಕ್ಷೆ
07-03-2024 : ಇತಿಹಾಸ ಹಾಗೂ ಭೌತಶಾಸ್ತ್ರ
09-03-2024 : ಐಚ್ಛಿಕ ಕನ್ನಡ,ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ,ಗೃಹ ವಿಜ್ಞಾನ
11-03-2024 : ತರ್ಕಶಾಸ್ತ್ರ,ವ್ಯವಹಾರ ಅಧ್ಯಯನ ಪರೀಕ್ಷೆ
13-03-2024 : ಇಂಗ್ಲಿಷ್ ಪರೀಕ್ಷೆ
15-03-2024 : ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ ಪರೀಕ್ಷೆ
16-03-2024 : ಅರ್ಥಶಾಸ್ತ್ರ
18-03-2024 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ
20-03-2024 : ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
22-03-2024 : ಹಿಂದಿ ಪರೀಕ್ಷೆ

ಇನ್ನೂ,   ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ.

ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಪತ್ರ ಪಡೆದ ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿದೆ. ನಕಲು ಮಾಡುವ ಸಾಮಗ್ರಿಗಳನ್ನು ಹಾಗೂ ಹೊರಗಿನಿಂದ ಕಾಪಿ ಬರೆದು ಪರೀಕ್ಷಾ ಕೇಂದ್ರಗಳಲ್ಲಿ ಪೂರೈಸುವುದನ್ನು ನಿರ್ಬಂಧಿಸಲಾಗಿದೆ. 200 ಮೀಟರ್ ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...