ಶಿವಮೊಗ್ಗ : ರೈಲಿಗೆ ತಲೆಕೊಟ್ಟು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿರಿವಂತೆ ಬಳಿ ಇಂದು ನಡೆದಿದೆ.
ಬೆಂಗಳೂರು-ತಾಳಗುಪ್ಪ ರೈಲಿಗೆ ತಲೆಕೊಟ್ಟು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಭೂಮಿಕಾ (18) ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇಂದು ದ್ವಿತೀಯ ಪಿಯುಸಿಯ ಭೌತಶಾಸ್ತ್ರ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರೀಕ್ಷೆ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.