ಮಂಡ್ಯ: ಹಿಂದೂಪರ ಸಂಘಟನೆಗಳಿಂದ ಇಂದು ಜಾಮಿಯಾ ಮಸೀದಿ ಚಲೋ ಹಮ್ಮಿಕೊಳ್ಳಲಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ನೇತೃತ್ವದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಜಿಲ್ಲಾಡಳಿತದಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಡಿಎಆರ್, ಕೆಎಸ್ಆರ್ಪಿ ತುಕಡಿಗಳನ್ನು ಭದ್ರತೆಗೆ ನಿಯೋಜಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ನಿನ್ನೆ ಎಸ್ಪಿ ನೇತೃತ್ವದಲ್ಲಿ ಪಥಸಂಚಲನ ನಡೆಸಲಾಗಿತ್ತು. ಜಾಮಿಯಾ ಮಸೀದಿ 5 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಶ್ರೀರಂಗಪಟ್ಟಣದ ಜಾಮಿಯಾ ಮಸೀದಿಯಲ್ಲಿ ಆಂಜನೇಯ ದೇಗುಲವಿದ್ದು ಜ್ಞಾನವ್ಯಾಪಿ ಮಸೀದಿ ರೀತಿ ಇಲ್ಲಿಯೂ ಸಮೀಕ್ಷೆ ನಡೆಸಬೇಕು ಎಂದು ವಿಶ್ವ ಹಿಂದೂ ಪರಿಷತ್, ಬಜರಂಗದಳ ಒತ್ತಾಯಿಸಿದ್ದು, ಇಂದು ಮಂದಿರ ಚಲೋ ಕೈಗೊಂಡಿವೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.