ನವದೆಹಲಿ : ಲೋಕಸಭೆ ಕಲಾಪದ ವೇಳೆ ಭದ್ರತಾ ವೈಪಲ್ಯ ನಡೆದಿರುವ ಪ್ರಕರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶಿಸಿದೆ.
ಈ ಸಂಬಂಧ ಸಂಸತ್ ನಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ತುರ್ತು ಸಭೆ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನ ಒಳಗೆ ಹಿರಿಯ ಸಚಿವರೊಂದಿಗೆ ಸಭೆ ನಡೆಸುತ್ತಿದ್ದಾರೆ. ಅನುರಾಗ್ ಠಾಕೂರ್, ಪಿಯೂಷ್ ಗೋಯಲ್, ಪ್ರಹ್ಲಾದ್, ಜೋಶಿ, ಅಮಿತ್ ಶಾ ಮತ್ತು ಜೆಪಿ ನಡ್ಡಾ ಉಪಸ್ಥಿತರಿದ್ದಾರೆ.
ಭದ್ರತಾ ಉಲ್ಲಂಘನೆಯ ನಂತರ, ಸಂಸತ್ತಿನ ಒಳಗೆ ಬಿಗಿ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಮಕರ ದ್ವಾರದಿಂದ ಸಂಸತ್ ಭವನಕ್ಕೆ ಪ್ರವೇಶಿಸಲು ಸಂಸದರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ ಮತ್ತು ಕಟ್ಟಡಕ್ಕೆ ಪ್ರವೇಶಿಸುವ ಎಲ್ಲಾ ವ್ಯಕ್ತಿಗಳನ್ನು ಅವರ ಬೂಟುಗಳನ್ನು ತೆಗೆಯುವಂತೆ ಮಾಡುವ ಮೂಲಕ ಕೂಲಂಕಷವಾಗಿ ಪರಿಶೀಲಿಸಲಾಗುತ್ತಿದೆ.ಇನ್ನೂ, ಸಂಸತ್ತಿನಲ್ಲಿ ಬುಧವಾರ ಭದ್ರತಾ ಲೋಪ ಪ್ರಕರಣದ ಹಿನ್ನೆಲೆಯಲ್ಲಿ ಲೋಕಸಭಾ ಸಚಿವಾಲಯವು 8 ಸಿಬ್ಬಂದಿಯನ್ನು ಅಮಾನತುಗೊಳಿಸಿದೆ.