ಸಿಎಂ ಸಿದ್ದರಾಮಯ್ಯ ಪ್ರಯಾಣದ ವೇಳೆ ಭದ್ರತಾ ಲೋಪ ನಡೆದಿದ್ದು, ಸಿಎಂ ಕಾರಿನ ಹಿಂದೆಯೇ ಬೈಕ್ ಸವಾರರು ಅಡ್ಡಾದಿಡ್ಡಿಯಾಗಿ ಬೈಕ್ ಚಲಾಯಿಸಿದ ಘಟನೆ ಅಥಣಿಯಲ್ಲಿ ನಡೆದಿದೆ.
ಮಾಜಿ ಡಿಸಿಎಂ ‘ಲಕ್ಷ್ಮಣ್ ಸವದಿ’ ಮನೆಯಿಂದ ಬಸವೇಶ್ವರ ವೃತ್ತಕ್ಕೆ ಸಿದ್ಧರಾಮಯ್ಯ ತೆರಳುತ್ತಿದ್ದ ವೇಳೆ ಸಿಎಂ ಕಾರಿನ ಹಿಂದೆ ಹಾಗೂ ಬೆಂಗಾವಲು ವಾಹನದ ಮುಂದುಗಡೆ ಸವಾರರು ಅಡ್ಡಾದಿಡ್ಡಿಯಾಗಿ ಬೈಕ್ ಚಲಾಯಿಸಿದುಕೊಂಡು ಹೋಗಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಬೈಕ್ ಸವಾರರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.