alex Certify BREAKING NEWS: ಭಾರತದ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ನಿವಾಸಕ್ಕೆ ಭದ್ರತೆ ಹೆಚ್ಚಳ, ಕಾರಣ ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಭಾರತದ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ನಿವಾಸಕ್ಕೆ ಭದ್ರತೆ ಹೆಚ್ಚಳ, ಕಾರಣ ಗೊತ್ತಾ…?

ಮುಂಬೈ: ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಅವರ ಆಂಟಿಲಾ ನಿವಾಸಕ್ಕೆ ಭದ್ರತೆಯನ್ನು ಹೆಚ್ಚಳ ಮಾಡಲಾಗಿದೆ.

ಕ್ಯಾಬ್ ಚಾಲಕನ ಬಳಿ ಅಪರಿಚಿತರು ಆಂಟಿಲಾ ವಿಳಾಸ ಕೇಳಿದ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕಂಟ್ರೋಲ್ ರೂಮ್ ಗೆ ಕ್ಯಾಬ್ ಚಾಲಕ ಮಾಹಿತಿ ನೀಡಿದ್ದಾನೆ. ಆಂಟಿಲಾ ವಿಳಾಸ ಕೇಳುತ್ತಿದ್ದ ವ್ಯಕ್ತಿಗಳ ಬಳಿ ಬ್ಯಾಗ್ ಇದ್ದು, ಸಂಶಯಾಸ್ಪದವಾಗಿ ವರ್ತಿಸುತ್ತಿದ್ದರು ಎಂದು ಕ್ಯಾಬ್ ಚಾಲಕ ಮಾಹಿತಿ ನೀಡಿದ್ದು, ಮುಕೇಶ್ ಅಂಬಾನಿ ನಿವಾಸಕ್ಕೆ ತೆರಳುವ ಮಾರ್ಗದಲ್ಲಿ ಬಿಗಿಭದ್ರತೆ ಕೈಗೊಳ್ಳಲಾಗಿದೆ. ಮುಂಬೈನ ಅಲ್ಟಾಮೌಂಟ್ ರಸ್ತೆಯಲ್ಲಿರುವ ನಿವಾಸಕ್ಕೆ ಬಿಗಿ ಭದ್ರತೆ ಒದಗಿಸಲಾಗಿದೆ. ನಿವಾಸ ಸಂಪರ್ಕಿಸುವ ಮಾರ್ಗಗಳಲ್ಲಿ ಚೆಕ್ ಪೋಸ್ಟ್ ಗಳನ್ನು ನಿರ್ಮಿಸಿ ತಪಾಸಣೆ ನಡೆಸಲಾಗಿದೆ.

ಟ್ಯಾಕ್ಸಿ ಡ್ರೈವರ್‌ನಿಂದ ನಮಗೆ ಕರೆ ಬಂದಿದ್ದು, ಇಬ್ಬರು ಬ್ಯಾಗ್ ಹೊತ್ತೊಯ್ಯುತ್ತಿದ್ದವರು ಮುಖೇಶ್ ಅಂಬಾನಿ ಅವರ ನಿವಾಸ ಆಂಟಿಲಿಯಾವನ್ನು ಕೇಳಿದ್ದಾರೆ. ಡಿಸಿಪಿ ಮಟ್ಟದ ಅಧಿಕಾರಿ ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಆಂಟಿಲಿಯಾ ಹೊರಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳನ್ನೂ ಪರಿಶೀಲಿಸಲಾಗುತ್ತಿದೆ ಎಂದು  ಮುಂಬೈ ಪೊಲೀಸರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...