ನಾವು ಆರೋಗ್ಯವಾಗಿರಲು ನೈಸರ್ಗಿಕವಾಗಿ ದೊರೆಯುವ ಸೊಪ್ಪುಗಳು, ಎಲೆಗಳನ್ನು ಸೇವಿಸುವುದು ಉತ್ತಮ. ಇವುಗಳಲ್ಲಿ ಔಷಧೀಯ ಗುಣಗಳಿರುತ್ತದೆ. ಅದರಲ್ಲಿ ಬೇ ಎಲೆ ಕೂಡ ಒಂದು. ಅಡುಗೆಯ ಪರಿಮಳವನ್ನು ಹೆಚ್ಚಿಸಲು ಇದನ್ನು ಅಡುಗೆಗೆ ಬಳಸುತ್ತಾರೆ. ಹಾಗೇ ಇದನ್ನು ಬಳಸಿ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಂತೆ.
ಬಾಣಲೆಯಲ್ಲಿ 2-3 ಬೇ ಎಲೆಗಳನ್ನು ಹಾಕಿ ಅದಕ್ಕೆ ಒಂದು ಲೋಟ ನೀರು ಸೇರಿಸಿ ಚೆನ್ನಾಗಿ ಕುದಿಸಿ. ಇದನ್ನು ಉಗುರು ಬೆಚ್ಚಗಿರುವಾಗ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ. ಇದರಲ್ಲಿ ಆ್ಯಂಟಿ ಆಕ್ಸಿಡೆಂಟ್ ಗಳು ಸಮೃದ್ಧವಾಗಿರುವ ಕಾರಣ ಇದು ಕಿಡ್ನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುತ್ತದೆ. ಕಿಡ್ನಿಯನ್ನು ಆರೋಗ್ಯವಾಗಿಡುತ್ತದೆ.
ಇದನ್ನು ಸೇವಿಸುವುದರಿಂದ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳು ನಿವಾರಣೆಯಾಗುತ್ತದೆ. ಇದು ಜೀರ್ಣಕ್ರಿಯೆ ಚೆನ್ನಾಗಿ ಆಗುವಂತೆ ಸಹಾಯ ಮಾಡುತ್ತದೆ. ಇದರಿಂದ ಗ್ಯಾಸ್, ಆ್ಯಸಿಡಿಟಿ, ಅಜೀರ್ಣದ ಸಮಸ್ಯೆಗಳು ಕಾಡುವುದಿಲ್ಲ.
ಇದರಲ್ಲಿರುವ ಪೋಷಕಾಂಶಗಳು ದೇಹದಲ್ಲಿನ ಗ್ಲುಕೋಸ್ ಮಟ್ಟವನ್ನು ಸಮತೋಲನದಲ್ಲಿಡುತ್ತದೆ. ಇದರಿಂದ ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗುವುದಿಲ್ಲ.
ಇದು ಉರಿಯೂತದ ಗುಣಲಕ್ಷಣಗಳನ್ನು ಹೊಂದಿರುವ ಕಾರಣ ಇದು ದೇಹದ ನೋವನ್ನು ನಿವಾರಿಸುತ್ತದೆ ಮತ್ತು ಇದು ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.