ಕೊಪ್ಪಳ: 2023-24ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಬಿತ್ತನೆಗೆ ಅವಶ್ಯವಿರುವ ವಿವಿಧ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ವಿತರಣೆ ಮಾಡಲಾಗುತ್ತಿದೆ.
ಪ್ರಸಕ್ತ ಹಿಂಗಾರು ಹಂಗಾಮು ಪ್ರಾರಂಭವಾಗಿದ್ದು, ಹಿಂಗಾರು ಹಂಗಾಮಿನಲ್ಲಿ ಬೇಕಾಗುವ ಕಡಲೆ, ಜೋಳ, ಗೋಧಿ, ಸೂರ್ಯಕಾಂತಿ ಹಾಗೂ ಕುಸುಬೆ ಬಿತ್ತನೆ ಬೀಜಗಳನ್ನು ಈಗಾಗಲೇ ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಮಾಡಲಾಗಿದೆ. ಬಿತ್ತನೆ ಬೀಜಗಳನ್ನು ರಿಯಾಯಿತಿ ದರದಲ್ಲಿ ರೈತ ಸಂಪರ್ಕ ಕೇಂದ್ರಗಳ ಮುಖಾಂತರ ವಿತರಣೆ ಮಾಡಲಾಗುತ್ತಿದ್ದು, ರೈತರು ಇದರ ಸದಪಯೋಗ ಪಡೆದುಕೊಳ್ಳಬೇಕು.
ಬಿತ್ತನೆ ಕಾರ್ಯಕ್ಕೆ ಹಾಗೂ ಬೆಳೆಗಳಿಗೆ ಬೇಕಾಗುವ ರಸಗೊಬ್ಬರವು ಜಿಲ್ಲೆಯಲ್ಲಿ ದಾಸ್ತಾನಿದ್ದು, 12535 ಟನ್ ಯೂರಿಯಾ, 7477 ಟನ್ ಡಿಎಪಿ, 17368 ಟನ್ ಕಾಂಪ್ಲೆಕ್ಸ್, 839 ಟನ್ ಎಂಓಪಿ ಹಾಗೂ 407 ಟನ್ ಎಸ್.ಎಸ್.ಪಿ ಸೇರಿದಂತೆ ಒಟ್ಟಾರೆ 38626 ಮೆಟ್ರಿಕ್ ಟನ್ ಅಷ್ಟು ರಸಗೊಬ್ಬರ ಜಿಲ್ಲೆಯಲ್ಲಿ ಲಭ್ಯವಿದೆ. ಜಿಲ್ಲೆಯಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರಕ್ಕೆ ಯಾವುದೇ ಕೊರತೆ ಇಲ್ಲವೆಂದು ಎಂದು ಕೊಪ್ಪಳ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.