ನಿರ್ಭಯಾ, ಹತ್ರಾಸ್, ಶ್ರದ್ಧಾ ವಾಕರ್ ಸಂತ್ರಸ್ತರ ಪರ ವಾದಿಸಿದ್ದ ವಕೀಲೆ ಸೀಮಾ ಕುಶ್ವಾಹಾ ಬಿಜೆಪಿ ಸೇರ್ಪಡೆ

ನವದೆಹಲಿ: ಸುಪ್ರೀಂ ಕೋರ್ಟ್ ವಕೀಲೆ ಮತ್ತು ಬಿಎಸ್ಪಿ ನಾಯಕಿ ಸೀಮಾ ಕುಶ್ವಾಹಾ ಅವರು ಸೋಮವಾರ ಭಾರತೀಯ ಜನತಾ ಪಕ್ಷಕ್ಕೆ(ಬಿಜೆಪಿ) ಸೇರ್ಪಡೆಗೊಂಡರು.

ಅವರನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಪಕ್ಷಕ್ಕೆ ಸ್ವಾಗತಿಸಿದರು. ನಿರ್ಭಯಾ ಸಾಮೂಹಿಕ ಅತ್ಯಾಚಾರ, ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಶ್ರದ್ಧಾ ವಾಕರ್ ಹತ್ಯೆಯಂತಹ ಪ್ರಮುಖ ಪ್ರಕರಣಗಳಲ್ಲಿ ಸಂತ್ರಸ್ತರ ಪರವಾಗಿ ಕುಶ್ವಾಹ ವಾದ ಮಂಡಿಸಿದ್ದಾರೆ.

ಕುಶ್ವಾಹಾ ಅವರು ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷ(ಬಿಎಸ್ಪಿ)ಕ್ಕೆ 2022 ರ ಜನವರಿಯಲ್ಲಿ ಸೇರಿದ್ದರು.

ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸಂತ್ರಸ್ತೆಯ ತಾಯಿಯನ್ನು ಪ್ರತಿನಿಧಿಸಿದ ನಂತರ ಕುಶ್ವಾಹಾ ಖ್ಯಾತಿಗೆ ಬಂದರು. ಅವರು ನಿರ್ಭಯಾ ಜ್ಯೋತಿ ಟ್ರಸ್ಟ್ ಸ್ಥಾಪಿಸಿದರು ಮತ್ತು ಅತ್ಯಾಚಾರ ಸಂತ್ರಸ್ತರ ಪರವಾಗಿ ನ್ಯಾಯಕ್ಕಾಗಿ ವಕೀಲರ ಅಭಿಯಾನವನ್ನು ಪ್ರಾರಂಭಿಸಿದರು.

ನಿರ್ಭಯಾ ಅತ್ಯಾಚಾರ ಪ್ರಕರಣವು 2012 ರಲ್ಲಿ ರಾಷ್ಟ್ರದಾದ್ಯಂತ ಭಾರಿ ಸುದ್ದಿಯಾಗಿತ್ತು. ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳನ್ನು 2020 ರ ಮಾರ್ಚ್ 20 ರಂದು ದೆಹಲಿಯ ತಿಹಾರ್ ಜೈಲಿನಲ್ಲಿ ಬೆಳಿಗ್ಗೆ 5:30 ಕ್ಕೆ ಗಲ್ಲಿಗೇರಿಸಲಾಯಿತು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read