
ಉಡುಪಿ: ಸೀತಾ ನದಿಯಲ್ಲಿ ಮೀನು ಹಿಡಿಯಲು ಹೋಗಿ ಇಬ್ಬರು ನೀರು ಪಾಲಾಗಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೊಸಾಳ ಗ್ರಾಮದಲ್ಲಿ ನಡೆದಿದೆ.
ಶ್ರೀಶ (21) ಹಾಗೂ ಪ್ರಶಾಂತ್ ಪೂಜಾರಿ (30) ಮೃತ ದುರ್ದೈವಿಗಳು. ಮೀನಿಗೆ ಬಲೆ ಹಾಕುವಾಗ ನೀರಿನ ಸೆಳೆತಕ್ಕೆ ಸಿಲುಕಿ ಇಬ್ಬರೂ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.