ಮಾರ್ಚ್ 29 ರಂದು ಮಾದರಿ ನೀತಿ ಸಂಹಿತೆ(ಎಂಸಿಸಿ) ಜಾರಿಗೆ ಬಂದ ನಂತರ ಜಾರಿ ಸಂಸ್ಥೆಗಳು ಕರ್ನಾಟಕದಲ್ಲಿ ಒಟ್ಟು 170 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಂಡಿವೆ ಎಂದು ಚುನಾವಣಾ ಆಯೋಗ ಭಾನುವಾರ ತಿಳಿಸಿದೆ.
ಒಟ್ಟು 170.27 ಕೋಟಿ ರೂಪಾಯಿ ಜಪ್ತಿಯಲ್ಲಿ 71 ಕೋಟಿ ರೂಪಾಯಿ ನಗದು, 38 ಕೋಟಿ ರೂಪಾಯಿ ಮೌಲ್ಯದ ಮದ್ಯ, 29 ಕೋಟಿ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ, 19 ಕೋಟಿ ರೂಪಾಯಿ ಮೌಲ್ಯದ ಉಚಿತ ವಸ್ತುಗಳು ಮತ್ತು 13 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಸೇರಿದೆ ಎಂದು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ತಿಳಿಸಿದೆ.
ಇವುಗಳಿಗೆ ಸಂಬಂಧಿಸಿದಂತೆ 1,410 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಮೇ 10 ರ ವಿಧಾನಸಭಾ ಚುನಾವಣೆಯ ಘೋಷಣೆಗೂ ಮುನ್ನ ಮಾರ್ಚ್ 9 ರಿಂದ ಮಾರ್ಚ್ 27 ರ ನಡುವೆ ಸುಮಾರು 58 ಕೋಟಿ ರೂ. ಮೌಲ್ಯದ ನಗದು, ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.