
ಚಾಮರಾಜನಗರ: ಹೊಗೇನಕಲ್ ಜಲಪಾತದ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋಗಿದ್ದ ವಿದ್ಯಾರ್ಥಿ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಮೈಸೂರು ಮೂಲದ ಉಮಾಶಂಕರ್(19) ಮೃತಪಟ್ಟ ವಿದ್ಯಾರ್ಥಿ ಎಂದು ಹೇಳಲಾಗಿದೆ. ಸ್ನೇಹಿತರೊಂದಿಗೆ ಹೊಗೇನಕಲ್ ಫಾಲ್ಸ್ ವೀಕ್ಷಣೆಗೆ ತೆರಳಿದ್ದ ಉಮಾಶಂಕರ್ ಫೋಟೋ ತೆಗೆಸಿಕೊಂಡ ನಂತರ ಜಲಪಾತದ ತುದಿಯಲ್ಲಿ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದು, ಈ ವೇಳೆ ಕಾಲು ಜಾರಿ 80 ಅಡಿ ಆಳಕ್ಕೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.