ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಯುವತಿ ಆಯತಪ್ಪಿ ಬಿದ್ದು ಗಾಯಗೊಂಡಿದ್ದಾರೆ.
ರಾಯಚೂರು ಮೂಲದ ಅಶ್ವಿನಿ ಗಾಯಗೊಂಡವರು ಎಂದು ಹೇಳಲಾಗಿದೆ. ಬೆಟ್ಟದ ಮೇಲಿಂದ ಜಾರಿ ಬಿದ್ದಿದ್ದಾರೆ. ಕಲ್ಲು ಬಂಡೆಯ ಮೇಲೆ ನಿಂತು ಸೂರ್ಯಾಸ್ತದ ಸೆಲ್ಫಿ ತೆಗೆದುಕೊಳ್ಳುವಾಗ ಅವಘಡ ಸಂಭವಿಸಿದೆ. ಗಾಯಗೊಂಡ ಯುವತಿ ಅಶ್ವಿನಿಯನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಗಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.