
ಶಿವಮೊಗ್ಗ ಸಮೀಪದ ಗಾಜನೂರು ತುಂಗಾ ಜಲಾಶಯದ ಬಳಿ ಸೆಲ್ಫಿ ತೆಗೆದುಕೊಳ್ಳಲು ಯುವಕ ಕಾಲುಜಾರಿ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.
ಶಿವಮೊಗ್ಗದ ವಿನಾಯಕನಗರ ನಿವಾಸಿಯಾಗಿರುವ ವಿನಾಯಕ್(22) ಮೃತಪಟ್ಟ ಯುವಕ ಎಂದು ಹೇಳಲಾಗಿದೆ. ಕುಟುಂಬದವರೊಂದಿಗೆ ಗಾಜನೂರು ಡ್ಯಾಮ್ ವೀಕ್ಷಣೆಗೆ ತೆರಳಿದ್ದು, ದಂಡೆಯ ಮೇಲೆ ಸೆಲ್ಫಿ ತೆಗೆದುಕೊಳ್ಳುವ ವೇಳೆ ಕಾಲು ಜಾರಿ ನದಿಗೆ ಬಿದ್ದಿದ್ದು, ಈಜಲು ಸಾಧ್ಯವಾಗದೆ ಮೃತಪಟ್ಟಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ತೀವ್ರ ಹುಡುಕಾಟದ ನಂತರ ಮೃತದೇಹವನ್ನು ಹೊರ ತೆಗೆದಿದ್ದಾರೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.