ನವದೆಹಲಿ : ದೆಹಲಿಯಲ್ಲಿ ಕಳೆದ ವರ್ಷದಂತೆ, ಈ ಬಾರಿ ಕೂಡ ದೀಪಾವಳಿಯಂದು ಪಟಾಕಿ ಸಿಡಿಸುವುದು ಹಾಗೂ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ
ಪಟಾಕಿಗಳ ಉತ್ಪಾದನೆ, ಸಂಗ್ರಹಣೆ, ಮಾರಾಟ (ಆನ್ಲೈನ್ ಮಾರಾಟ ಸೇರಿದಂತೆ) ಮತ್ತು ಸಿಡಿಸುವುದನ್ನು ನಿಷೇಧಿಸಲು ಸರ್ಕಾರ ನಿರ್ಧರಿಸಿದೆ ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರೈ ಹೇಳಿದ್ದಾರೆ. ಇದಕ್ಕಾಗಿ ಪರವಾನಗಿ ನೀಡದಂತೆ ದೆಹಲಿ ಪೊಲೀಸರಿಗೆ ಸೂಚನೆ ನೀಡಲಾಗಿದೆ.
ಈ ವರ್ಷವೂ ರಾಷ್ಟ್ರ ರಾಜಧಾನಿಯಲ್ಲಿ ದೀಪಾವಳಿಯಂದು ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗುವುದು. ಸೋಮವಾರ ವಾಯುಮಾಲಿನ್ಯದ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ. ದೆಹಲಿ ಪರಿಸರ ಸಚಿವ ಗೋಪಾಲ್ ರೈ ಈ ಬಗ್ಗೆ ಸೂಚನೆ ನೀಡಿದ್ದಾರೆ.ಪಟಾಕಿಗಳ ಉತ್ಪಾದನೆ, ಸಂಗ್ರಹಣೆ, ಮಾರಾಟ (ಆನ್ಲೈನ್ ಮಾರಾಟ ಸೇರಿದಂತೆ) ಮತ್ತು ಸಿಡಿಸುವುದನ್ನು ನಿಷೇಧಿಸಲು ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಪರವಾನಗಿ ನೀಡದಂತೆ ದೆಹಲಿ ಪೊಲೀಸರಿಗೆ ಸೂಚನೆ ನೀಡಲಾಗಿದೆ.