ಮೈಸೂರು : ಮೆಡಿಕಲ್ ಶಾಪ್’ನಲ್ಲಿ ಮಾತ್ರೆ ಮೂಲಕ ಡ್ರಗ್ಸ್ ಮಾರಾಟ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಚಿವರು ಹೊರ ರಾಜ್ಯಗಳಿಂದ ನಮ್ಮ ರಾಜ್ಯಕ್ಕೆ ಡ್ರಗ್ಸ್ ಸಪ್ಲೈ ಮಾಡಲಾಗುತ್ತಿದೆ. ಮೆಡಿಕಲ್ ಶಾಪ್’ನಲ್ಲಿ ಮಾತ್ರೆ ಮೂಲಕ ಡ್ರಗ್ಸ್ ಮಾರಾಟ ಮಾಡಲಾಗುತ್ತಿದೆ. ಮಾದಕ ವಸ್ತುಗಳನ್ನು ಸೇಲ್ ಮಾಡಲಾಗುತ್ತಿದೆ ಎಂಬ ಆರೋಪವಿದೆ. ಡ್ರಗ್ಸ್ ಮಾರುವವರ ವಿರುದ್ಧ ಕಾರ್ಯಾಚರಣೆ ನಡೆಸುತ್ತೇವೆ, ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದರು.