ಬೆಂಗಳೂರು : ದೇಶದ ಕೈಗಾರಿಕೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡುವುದು ಬಿಜೆಪಿಯ ಸಾಧನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ.
ಬಿಜೆಪಿಗೆ ಸಂವಿಧಾನದಲ್ಲಿ ನಂಬಿಕೆ ಇಲ್ಲ. ಸಂವಿಧಾನದ ಆಶಯಗಳಲ್ಲಿ ದೇಶವನ್ನು ಮುನ್ನಡೆಸುವುದು ಕಾಂಗ್ರೆಸ್ ಪಕ್ಷ ಮಾತ್ರ. ನೆಹರೂ, ಇಂದಿರಾಗಾಂಧಿ ಅವಧಿಯಲ್ಲಿ ಭೂ ಸುಧಾರಣೆ ಮಾಡಿದರು, ಕೈಗಾರಿಕೆಗಳನ್ನು ಸ್ಥಾಪಿಸಿದರು. ಈಗ ಬಿಜೆಪಿ ಇದಕ್ಕೆ ವಿರುದ್ಧವಾದ ಕೆಲಸ ಮಾಡುತ್ತಿದೆ. ರೈತರಿಂದ ಭೂಮಿ ಕಿತ್ತುಕೊಳ್ಳುವುದು, ದೇಶದ ಕೈಗಾರಿಕೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡುವುದು ಬಿಜೆಪಿಯ ಸಾಧನೆಯಾಗಿದೆ. ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಭಾರತ ಬಹುತ್ವದ ದೇಶ. ಈ ಬಹುತ್ವದ ದೇಶವನ್ನು ನಾಶ ಮಾಡಿ ಬಿಜೆಪಿಯ ಮೂಗಿನ ನೇರದ ಹಿಂದೂ ದೇಶ ಮಾಡುವುದು ಅಸಾಧ್ಯ. ಈ ದೇಶ ಪ್ರತಿಯೊಬ್ಬ ಭಾರತೀಯರಿಗೆ ಸೇರಿದ್ದು.
ಪ್ರಧಾನಿ ಮೋದಿ ಅವರಿಗೆ ಬಿಜೆಪಿ , ಎನ್ ಡಿ ಎ ಸೋಲು ಖಚಿತವಾಗಿ ಗೊತ್ತಾಗಿದೆ. ಹತಾಶರಾಗಿ ವಿಚಿತ್ರ ವಿಚಿತ್ರವಾಗಿ ಮಾತಾಡುತ್ತಿದ್ದಾರೆ. ದೇವರೇ ನನ್ನನ್ನು ಕಳುಹಿಸಿದ್ದು ಎಂದು ಮಾತಾಡುತ್ತಿದ್ದಾರೆ. ಸೋಲಿನ ಸುಳಿವು ಮೋದಿಯವರನ್ನು ಈ ಮಟ್ಟಕ್ಕೆ ಮಾಡಿಟ್ಟಿದೆ. ನಮ್ಮ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ದೇಶವನ್ನು ಮಾರ್ಪಡಿಸಲು ಬಿಜೆಪಿ ಮತ್ತು ಮೋದಿ ಯತ್ನಿಸುತ್ತಿದ್ದು ಇದಕ್ಕೆ ಭಾರತೀಯರು ಅವಕಾಶ ಕೊಡುವುದಿಲ್ಲ ಎಂಬ ನನಗಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ.