ನವದೆಹಲಿ: ಹಿರಿಯ ನಾಗರಿಕರಿಗೆ ಪ್ರಯಾಣ ದರದಲ್ಲಿ ನೀಡಲಾಗಿದ್ದ ರಿಯಾಯಿತಿ ರದ್ದುಪಡಿಸಿದ್ದರಿಂದ ರೈಲ್ವೆ ಇಲಾಖೆಗೆ 2022 -23ನೇ ಆರ್ಥಿಕ ವರ್ಷದಲ್ಲಿ ಹೆಚ್ಚುವರಿಯಾಗಿ 2242 ಕೋಟಿ ರೂ. ಆದಾಯ ಬಂದಿದೆ.
ಕೊರೋನಾ ಸಂದರ್ಭದಲ್ಲಿ ಹಿರಿಯ ನಾಗರಿಕರಿಗೆ ನೀಡಲಾಗಿದ್ದ ರಿಯಾಯಿತಿ ರದ್ದುಪಡಿಸಲಾಗಿತ್ತು. 2020 ರ ಮಾರ್ಚ್ 20 ರಿಂದ 2022ರ ಮಾರ್ಚ್ 31ರ ಅವಧಿಯಲ್ಲಿ ಹೆಚ್ಚುವರಿಯಾಗಿ 1,500 ಕೋಟಿ ರೂಪಾಯಿಯನ್ನು ರೈಲ್ವೆ ಇಲಾಖೆ ಗಳಿಸಿತ್ತು.
ಮಧ್ಯಪ್ರದೇಶದ ಚಂದ್ರಶೇಖರ್ ಗೌರ್ ಅವರು ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಸಿದ್ದ ಅರ್ಜಿಗೆ ರೈಲ್ವೆ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಹಿರಿಯ ನಾಗರಿಕರಿಗೆ ಪ್ರಯಾಣ ದರದಲ್ಲಿ ನೀಡಲಾಗಿದ್ದ ರಿಯಾಯಿತಿ ರದ್ದುಪಡಿಸಿದ್ದರಿಂದ ರೈಲ್ವೆ ಇಲಾಖೆ 2022 -23 ನೇ ಆರ್ಥಿಕ ವರ್ಷದಲ್ಲಿ ಹೆಚ್ಚುವರಿಯಾಗಿ 2242 ಕೋಟಿ ರೂ. ಆದಾಯ ಗಳಿಸಿದೆ ಎಂದು ಹೇಳಲಾಗಿದೆ.