
ನವದೆಹಲಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. 71 ವರ್ಷದ ಪಟೇಲ್ ಅವರಿಗೆ ಕೆಲವು ವಾರಗಳ ಹಿಂದೆ ಕೊರೋನಾ ಸೋಂಕು ತಗುಲಿತ್ತು.
ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ, ಮೇದಾಂತ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅರನ್ನು ಹೆಚ್ಚಿನ ಚಿಕಿತ್ಸೆಗಾಗಿ ಗುರುಗಾಂವ್ ಆಸ್ಪತ್ರೆಗೆ ಸ್ಥಳಾಂತರಿಸಲಾಗುವುದು.
ಅಹ್ಮದ್ ಪಟೇಲ್ ಅವರ ಪುತ್ರ ಫೈಸಲ್ ಪಟೇಲ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಅಹಮದ್ ಪಟೇಲ್ ಆರೋಗ್ಯಸ್ಥಿತಿ ಸ್ಥಿರವಾಗಿದ್ದು, ವೈದ್ಯಕೀಯ ನಿಗಾದಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಶೀಘ್ರ ಚೇತರಿಕೆಗೆ ಪ್ರಾರ್ಥಿಸುವಂತೆ ಮನವಿ ಮಾಡಿದ್ದಾರೆ. ಹಲವಾರು ಕಾಂಗ್ರೆಸ್ ನಾಯಕರು ಅಹಮದ್ ಪಟೇಲ್ ಅವರ ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.