ನವದೆಹಲಿ: ಕಾಂಗ್ರೆಸ್ ಶಾಸಕರೊಬ್ಬರು ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳು ಪೆಗಾಸಸ್ ಗೂಢಚಾರಿಕೆ ವಿರುದ್ಧ ಸಂಸತ್ತಿನಲ್ಲಿ ಸರ್ಕಾರವನ್ನು ಗುರಿಯಾಗಿಸಿಕೊಂಡು ತರಾಟೆಗೆ ತೆಗೆದುಕೊಳ್ಳುತ್ತಿವೆ. ಇದೇ ವೇಳೆ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರ ವಿರುದ್ಧ ರಾಜಸ್ಥಾನದ ಕಾಂಗ್ರೆಸ್ ಶಾಸಕರೊಬ್ಬರು ಅವಹೇಳನಕಾರಿ ಹೇಳಿಕೆ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ರಾಜಸ್ಥಾನದ ಯುವ ಕಾಂಗ್ರೆಸ್ ಅಧ್ಯಕ್ಷ ಮತ್ತು ದಂಗರ್ ಪುರ ಕ್ಷೇತ್ರದ ಶಾಸಕ ಗಣೇಶ್ ಘೋಗ್ರ ಅವರು ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಸೋಲಿಸುವ ಸಮಯ ಬಂದಿದೆ ಎಂದು ಹೇಳಿದ್ದಾರೆ.
ನಮ್ಮ ರಾಜ್ಯಪಾಲರು ಬಿಜೆಪಿ ದಳ್ಳಾಳಿಯಾಗಿದ್ದಾರೆ. ಕಾಂಗ್ರೆಸ್ ನಾಯಕರು ದೇಶದ ಸಾಮಾನ್ಯ ಜನರ ಪರವಾಗಿ ನಿಂತಿದ್ದಾರೆ ಎಂದು ಅವರು ತಿಳಿಸಿದ್ದು, ಡೀಸೆಲ್, ಪೆಟ್ರೋಲ್ ಬೆಲೆ, ಹಣದುಬ್ಬರದಿಂದ ಜನಸಾಮಾನ್ಯರು ತತ್ತರಿಸಿದ್ದಾರೆ. ನಮ್ಮನ್ನು ಗುಲಾಮರನ್ನಾಗಿ ಮಾಡಲಾಗುತ್ತಿದೆ ಎಂದು ಶಾಸಕ ಗಣೇಶ್ ದೂರಿದ್ದಾರೆ.
ಪೆಗಾಸಸ್ ಬಗ್ಗೆ ಶಾಸಕ ಗಣೇಶ್ ಮಾತನಾಡಿ, ನಮ್ಮ ವೈಯಕ್ತಿಕ ಮಾತುಕತೆಗಳನ್ನು ಆಲಿಸಲಾಗುತ್ತಿದೆ. ಯಾರು ಇಂತಹ ಕೆಟ್ಟ ಕೃತ್ಯವನ್ನು ಮಾಡಬಹುದು? ಎಂದು ಪ್ರಶ್ನಿಸಿದ ಅವರು, ಮೋದಿ ಮತ್ತು ಅಮಿತ್ ಶಾ ಅವರನ್ನು ಓಡಿಸಬೇಕು ಮತ್ತು ಥಳಿಸಬೇಕು. ಥಳಿಸಲು ಇದು ಸಕಾಲವಾಗಿದೆ ಎಂದಿದ್ದಾರೆ.
ದಿಗ್ವಿಜಯ ಸಿಂಗ್ ಬಳಕೆದಾರರ ಅವಹೇಳನಕಾರಿ ಪೋಸ್ಟ್ ಅನ್ನು ರಿಟ್ವೀಟ್ ಮಾಡಿದ್ದರು
ಪ್ರಧಾನಿ ಮೋದಿ ವಿರುದ್ಧ ಪಕ್ಷದ ನಾಯಕರು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುವುದು ಇದೇ ಮೊದಲಲ್ಲ. 2017 ರಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ ಸಿಂಗ್ ಅವಹೇಳನಕಾರಿ ಟ್ವೀಟ್ ಅನ್ನು ರಿಟ್ವೀಟ್ ಮಾಡಿದ್ದರು. ‘ಮೂರ್ಖರ ಚಿತ್ರ’(art of fooling) ದಲ್ಲಿ ಪ್ರಧಾನಿ ಅತ್ಯುತ್ತಮರು ಎಂದು ಹೇಳಿದ್ದಾರೆ. ಪೋಸ್ಟ್ ನನ್ನದಲ್ಲ. ಅದನ್ನು ಪೋಸ್ಟ್ ಮಾಡಲು ನಾನು ಸಹಾಯ ಮಾಡಲಿಲ್ಲ. ಸಂಬಂಧಪಟ್ಟ ವ್ಯಕ್ತಿಗೆ ನನ್ನ ಕ್ಷಮೆಯಾಚಿಸುತ್ತೇವೆ ಎಂದಿದ್ದರು.
2018 ರಲ್ಲಿ ತಿರುವನಂತಪುರಂ ಸಂಸದ ಶಶಿ ತರೂರ್ ಅವರು, ಪಿಎಂ ಮೋದಿ ಅವರು ‘ಚೇಳಿನಂತೆ’ ಎಂದು ಹೇಳಿದ್ದರು. ನೀವು ಅದನ್ನು ನಿಮ್ಮ ಕೈಯಿಂದ ತೆಗೆದುಹಾಕಲು ಸಾಧ್ಯವಿಲ್ಲ ಮತ್ತು ನೀವು ಅದನ್ನು ಚಪ್ಪಲ್‌ನಿಂದ ಹೊಡೆಯಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದರು.