ಕೋಲಾರ : ಬಂಗಾರ ಪೇಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ ಹಿರಿಯ ನಾಯಕ ಸಿ.ವೆಂಕಟೇಶಪ್ಪ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಅವರಿಗೆ ನಿನ್ನೆ ರಾತ್ರಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಕೋಲಾರದ ಆರ್ ಎಲ್ ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ.
ಸದ್ಯ ವೆಂಕಟೇಶಪ್ಪ ನಿವಾಸದ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ರಾಜಕಾರಣಿಗಳು , ಸಾರ್ವಜನಿಕರು ಅಂತಿಮ ದರ್ಶನ ಪಡೆದಿದ್ದಾರೆ.