ಬೀದರ್: ಹಿರಿಯ ಐಪಿಎಸ್ ಅಧಿಕಾರಿ ಅಜಯ್ ಹಿಲೋರಿ ಡೆಲಿವರಿ ಅಸ್ವಸ್ಥರಾಗಿದ್ದು, ತಲೆ ಸುತ್ತು, ಸುಸ್ತಿನಿಂದಾಗಿ ನಿನ್ನೆ ತಡರಾತ್ರಿ ಬೀದರ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೀದರ್ ಎಟಿಎಂ ಸಿಬ್ಬಂದಿ ಕೊಲೆ ಮಾಡಿ ಹಣ ದರೋಡೆ ಪ್ರಕರಣದ ತನಿಖೆಯ ನೇತೃತ್ವವನ್ನು ಅವರು ವಹಿಸಿದ್ದರು. ಘಟನೆ ನಡೆದು 8 ದಿನವಾದರೂ ಆರೋಪಿಗಳ ಪತ್ತೆಯಾಗಿಲ್ಲ.
ಹಗಲು, ರಾತ್ರಿ ಕೆಲಸ ಮಾಡಿದ್ದ ಹಿನ್ನೆಲೆಯಲ್ಲಿ ಅಸ್ವಸ್ಥರಾಗಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆರೋಗ್ಯ ವಿಚಾರಿಸಿದ್ದಾರೆ. ಬೀದರ್ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಕೂಡ ಆರೋಗ್ಯ ವಿಚಾರಿಸಿದ್ದಾರೆ.