ಎನ್ ಸಿ ಸಿ ಪರೇಡ್ ವೇಳೆ ಸೀನಿಯರ್ ವಿದ್ಯಾರ್ಥಿಯೋರ್ವ ಜೂನಿಯರ್ ವಿದ್ಯಾರ್ಥಿಗೆ ಮನಸೋ ಇಚ್ಚೆ ಥಳಿಸಿದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದ್ದು, ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ.
ತರಬೇತಿಯ ಸಮಯದಲ್ಲಿ ವಿದ್ಯಾರ್ಥಿಗಳು ಸರಿಯಾಗಿ ಪರೇಡ್ ಮಾಡಲಿಲ್ಲ ಎಂದು ವಿದ್ಯಾರ್ಥಿಗಳಿಗೆ ಮೈದಾನದಲ್ಲಿ ಓಡಿಸುವುದು, ಕೈಗಳನ್ನು ಮೇಲಕ್ಕೆತ್ತಿ ಎದ್ದು ನಿಲ್ಲುವಂತೆ ಮಾಡುವಂತಹ ಶಿಕ್ಷೆ ನೀಡುವುದು ವಾಡಿಕೆಯಾಗಿದೆ. ಆದರೆ ಇಲ್ಲಿ ವಿದ್ಯಾರ್ಥಿಯೋರ್ವ ಜೂನಿಯರ್ ವಿದ್ಯಾರ್ಥಿಗೆ ಲಾಠಿಯಲ್ಲಿ ಮನಸೋ ಇಚ್ಚೆ ಥಳಿಸಿದ್ದಾನೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ.
ಕಾಲೇಜಿನ ಎನ್ ಸಿಸಿ ಹಿರಿಯ ವಿದ್ಯಾರ್ಥಿಯೊಬ್ಬ ಎನ್ ಸಿಸಿ ತರಬೇತಿಯಲ್ಲಿ ಉತ್ತಮ ಪ್ರದರ್ಶನ ನೀಡದ ವಿದ್ಯಾರ್ಥಿಗಳನ್ನು ಕರೆದೊಯ್ದು ನೆಲದ ಮೇಲೆ ಮಲಗಿಸಿದ್ದಾನೆ. ವಿದ್ಯಾರ್ಥಿಗಳನ್ನು ನೆಲದ ಮೇಲೆ ಮಲಗಿಸಿದ ಹಿರಿಯ ವಿದ್ಯಾರ್ಥಿ ವಿದ್ಯಾರ್ಥಿಗಳ ಮೇಲೆ ಲಾಠಿಯಿಂದ ಹಲ್ಲೆ ನಡೆಸಿ ಅಮಾನವೀಯವಾಗಿ ವರ್ತಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ. ವಿದ್ಯಾರ್ಥಿಗಳ ಮೇಲೆ ಕ್ರೌರ್ಯ ನಡೆಸಿದ ಸೀನಿಯರ್ ವಿದ್ಯಾರ್ಥಿಯನ್ನು ಅಮಾನತು ಮಾಡಲಾಗಿದೆ.