ಮಂಗಳೂರು: ಕನ್ನಡಿಗರ ಪಾಲಿನ ಕಾವೇರಿ ನೀರು ಬೇರೆ ರಾಜ್ಯಕ್ಕೆ ಸೇರಬೇಕಾ ಎಂದು ಬಿಜೆಪಿ ಜಾಹೀರಾತಿನಲ್ಲಿ ಪ್ರಶ್ನೆ ಮಾಡಿರುವ ಕುರಿತಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಪ್ರತಿಕ್ರಿಯೆ ನೀಡಿದ್ದಾರೆ.
ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ರಾಜ್ಯಕ್ಕೆ ಆಗಮಿಸಿರುವ ಅವರು ಮಂಗಳೂರಿನಲ್ಲಿ ಮಾತನಾಡಿ, ಕರ್ನಾಟಕ, ತಮಿಳುನಾಡು ಜನ ಸಹೋದರ ಸಹೋದರಿಯರು. ಕರ್ನಾಟಕದ ಸಾವಿರಾರು ಜನ ತಮಿಳುನಾಡಿನಲ್ಲಿ ಕೆಲಸ ಮಾಡುತ್ತಿದ್ದಾರೆ. ತಮಿಳುನಾಡಿನ ಸಾವಿರಾರು ಜನ ಕರ್ನಾಟಕದಲ್ಲಿ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕ ರಾಜ್ಯದಲ್ಲಿ 100 ಪರ್ಸೆಂಟ್ ನೀರಿನ ಸಮಸ್ಯೆ ಇರುವುದು ನಿಜ. ದ್ವೇಷದ ಭಾವನೆ ಬಿಟ್ಟು ಎಲ್ಲಾ ರಾಜ್ಯದವರು ಚೆನ್ನಾಗಿರಬೇಕೆಂಬುದು ಬಯಕೆಯಾಗಿದೆ ಎಂದು ಹೇಳಿದ್ದಾರೆ.
ನಿಯಮದ ಪ್ರಕಾರ ಮೇಕೆದಾಟು ಯೋಜನೆ ಜಾರಿಯಾದರೆ ಚೆನ್ನಾಗಿರುತ್ತದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಎಲ್ಲವನ್ನು ನೋಡಿ ನಿರ್ಧರಿಸುತ್ತದೆ. ಕಾವೇರಿ ವಿಚಾರದಲ್ಲಿ ಭಾವನಾತ್ಮಕವಾಗಿ ಮಾತನಾಡುವುದು ಬೇಕಾಗಿಲ್ಲ. ಕೇಂದ್ರ ಸರ್ಕಾರ, ಸುಪ್ರೀಂಕೋರ್ಟ್, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತೀರ್ಮಾನಿಸುತ್ತವೆ ಎಂದು ಹೇಳಿದ್ದಾರೆ.