
ಬೆಂಗಳೂರು: ಕರ್ನಾಟಕ ರಾಜ್ಯವು ಪ್ರತ್ಯೇಕ ಧ್ವಜ ಹೊಂದಲು ರಾಜ್ಯ ಸರ್ಕಾರ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಬೆಳಗಾವಿಯ ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠದಿಂದ ಈ ಆದೇಶ ನೀಡಲಾಗಿದೆ.
ಕರ್ನಾಟಕ ಪ್ರತ್ಯೇಕ ಧ್ವಜ ಹೊಂದುವ ವಿಚಾರಣೆ ನ್ಯಾಯಾಲಯದ ವಿಚಾರಣಾ ವ್ಯಾಪ್ತಿಗೆ ಒಳಪಡುವುದಿಲ್ಲ. ಅರ್ಜಿದಾರರು ತಪ್ಪಾಗಿ ಅರ್ಥೈಸಿಕೊಂಡು ಈ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆಗೆ ಮಾನ್ಯತೆಗೆ ಸಂಬಂಧಿಸಿದಂತೆ ನ್ಯಾಯಾಲಯವು ಯಾವುದೇ ಅಭಿಪ್ರಾಯ ವ್ಯಕ್ತಪಡಿಸಿಲ್ಲ ಎಂದು ತಿಳಿಸಿ ಅರ್ಜಿಯನ್ನು ವಜಾ ಮಾಡಲಾಗಿದೆ.