
ಬೆಂಗಳೂರು: ಆಟೋ, ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.
ವೀರಣ್ಣ (55) ಮೃತ ದುರ್ದೈವಿ. ದಾಬಸ್ ಪೇಟೆಯ ರಾಷ್ಟ್ರೀಯ ಹೆದ್ದಾರಿ 48ರ ಎಡೇಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ವೀರಣ್ಣ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಎಂಬಿಎ ವಿದ್ಯಾರ್ಥಿ ಸೇರಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಓರ್ವ ಗಾಯಾಳು ಸ್ಥಿತಿ ಚಿಂತಾಜನಕವಾಗಿದೆ.
ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.