alex Certify ವೇಗವಾಗಿ ಕಾರು ಚಲಾಯಿಸಿ ಅಪಘಾತ ಮಾಡಿದ ಕಿರುತೆರೆ ನಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೇಗವಾಗಿ ಕಾರು ಚಲಾಯಿಸಿ ಅಪಘಾತ ಮಾಡಿದ ಕಿರುತೆರೆ ನಟಿ

ಕಿರುತೆರೆ ನಟಿಯೊಬ್ಬರು ನಿರ್ಲಕ್ಷ್ಯದಿಂದ, ಯದ್ವಾತದ್ವಾ ವಾಹನ ಚಲಾಯಿಸಿ ಬೈಕ್ ಸವಾರನಿಗೆ ಗುದ್ದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಈ ಘಟನೆ ಹೈದರಾಬಾದ್ ಹತ್ತಿರ ನಡೆದಿದೆ. ಲಹರಿ ಎಂಬ ತೆಲುಗು ಕಿರುತೆರೆ ನಟಿ ಈ ರೀತಿ ಅಪಘಾತ ಮಾಡಿದವರು ಎನ್ನಲಾಗಿದೆ. ರಾತ್ರಿ ಸಮಯದಲ್ಲಿ ಶೂಟಿಂಗ್ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಕಾರನ್ನು ವೇಗವಾಗಿ ಚಲಾಯಿಸಿ, ಬೈಕ್ ಗೆ ಗುದ್ದಿದ್ದಾರೆ. ಬೈಕ್ ಸವಾರ ಭಾಸ್ಕರ್ ಎಂಬುವವರು ಗಾಯಗೊಂಡಿದ್ದು, ಸ್ಥಳೀಯರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಪೊಲೀಸು, ನಟಿ ಲಹರಿ ಅವರನ್ನು ವಿಚಾರಣೆಗೊಳಪಡಿಸಿ, ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಕಾರು ಚಲಾಯಿಸುತ್ತಿದ್ದಾಗ ಮದ್ಯ ಸೇವನೆ ಮಾಡಿರಲಿಲ್ಲ. ಆದರೆ, ವೇಗವಾಗಿ ಕಾರು ಚಲಾಯಿಸಿಕೊಂಡು ಬರುತ್ತಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಪೊಲೀಸರು ಮಾತ್ರ ಇದುವರೆಗೂ ಘಟನೆಯ ಕುರಿತು ಯಾವುದೇ ಹೇಳಿಕೆ ನೀಡಿಲ್ಲ. ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ವೈರಲ್ ಆಗಿ, ಚರ್ಚೆಗಳು ಶುರುವಾಗಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...