ಬೆಂಗಳೂರು : ಬೆಂಗಳೂರಿನಲ್ಲಿ ಸರಣಿ ಬಾಂಬ್ ಸ್ಫೋಟಕ್ಕೆ ಸಂಚು ರೂಪಿಸಿದ್ದ 6 ಮಂದಿ ವಿರುದ್ಧ NIA ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.
ಕಳೆದ ವರ್ಷ ಜುಲೈನಲ್ಲಿ ಆರ್ ಟಿ ನಗರದ ಮನೆಯೊಂದರ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು, ಈ ವೇಳೆ ಜೀವಂತ ಗ್ರೆನೇಡ್ ಪತ್ತೆಯಾಗಿತ್ತು. ಆರೋಪಿಗಳ ಬಳಿ 7 ನಾಡ ಪಿಸ್ತೂಲ್, 45 ಜೀವಂತ ಗುಂಡು, ಗ್ರೆನೇಡ್ ಹಾಗೂ ವಾಕಿಟಾಕಿಗಳು ಸಿಕ್ಕಿದ್ದವು. ನಂತರ ಪ್ರಕರಣವನ್ನು ಎನ್ ಐ ಎ ಗೆ ವರ್ಗಾಯಿಸಲಾಗಿತ್ತು.
ವಿಚಾರಣೆ ಸಂದರ್ಭದಲ್ಲಿ ಆರೋಪಿಗಳು ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಮುಂದಾಗಿದ್ದರು ಎಂಬ ವಿಚಾರ ತನಿಖೆಯಿಂದ ಹೊರ ಬಂದಿತ್ತು, ಇದೀಗ ರೂಪಿಸಿದ್ದ 6 ಮಂದಿ ವಿರುದ್ಧ NIA ವಿಶೇಷ ಕೋರ್ಟ್ ಗೆ NIA ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.