ನವದೆಹಲಿ: ಭಾರತದಲ್ಲಿಯೇ ಸ್ಪುಟ್ನಿಕ್ ವಿ ಲಸಿಕೆ ಉತ್ಪಾದನೆಗೆ ಕೇಂದ್ರ ಸರ್ಕಾರದಿಂದ ಅನುಮತಿ ನೀಡಲಾಗಿದೆ. ಮಹಾರಾಷ್ಟ್ರದ ಪುಣೆಯಲ್ಲಿರುವ ಸಿರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಸ್ಪುಟ್ನಿಕ್ ವಿ ಲಸಿಕೆ ಉತ್ಪಾದಿಸಲು ಒಪ್ಪಿಕೆ ನೀಡಲಾಗಿದೆ.
ರಷ್ಯಾದ ಮಾಸ್ಕೋದ ಗಮಾಲಿಯಾ ರಿಸರ್ಚ್ ಇನ್ಸ್ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಸಹಯೋಗದಲ್ಲಿ ಷರತ್ತುಗಳೊಂದಿಗೆ ಲಸಿಕೆ ಉತ್ಪಾದಿಸಲು ಸಿರಂ ಸಂಸ್ಥೆಗೆ ಡಿಸಿಜಿಐ ಅನುಮತಿ ನೀಡಿದೆ.
ಕೋವಿಶೀಲ್ಡ್ ಲಸಿಕೆ ಉತ್ಪಾದಿಸುತ್ತಿರುವ ಸಿರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಈಗ ಸ್ಪುಟ್ನಿಕ್ ಲಸಿಕೆಯನ್ನು ಕೂಡ ಉತ್ಪಾದಿಸಲಿದೆ. ಈಗಾಗಲೇ ಕೋವಿಶೀಲ್ಡ್, ಹೈದರಾಬಾದ್ ಭಾರತ್ ಬಯೋಟೆಕ್ ನ ಕೊವ್ಯಾಕ್ಸಿನ್ ಲಸಿಕೆಗಳು ಭಾರತದಲ್ಲಿ ತಯಾರಾಗುತ್ತಿದ್ದು, ಈಗ ಸ್ಪುಟ್ನಿಕ್ ವಿ ಲಸಿಕೆ ಕೂಡ ಉತ್ಪಾದನೆಯಾಗಲಿದೆ ಎನ್ನಲಾಗಿದೆ.