alex Certify BIG BREAKING: ಭಾರತದಲ್ಲೇ ಸ್ಪುಟ್ನಿಕ್ ಲಸಿಕೆ ಉತ್ಪಾದನೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಭಾರತದಲ್ಲೇ ಸ್ಪುಟ್ನಿಕ್ ಲಸಿಕೆ ಉತ್ಪಾದನೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್

ನವದೆಹಲಿ: ಭಾರತದಲ್ಲಿಯೇ ಸ್ಪುಟ್ನಿಕ್ ವಿ ಲಸಿಕೆ ಉತ್ಪಾದನೆಗೆ ಕೇಂದ್ರ ಸರ್ಕಾರದಿಂದ ಅನುಮತಿ ನೀಡಲಾಗಿದೆ. ಮಹಾರಾಷ್ಟ್ರದ ಪುಣೆಯಲ್ಲಿರುವ ಸಿರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಸ್ಪುಟ್ನಿಕ್ ವಿ ಲಸಿಕೆ ಉತ್ಪಾದಿಸಲು ಒಪ್ಪಿಕೆ ನೀಡಲಾಗಿದೆ.

ರಷ್ಯಾದ ಮಾಸ್ಕೋದ ಗಮಾಲಿಯಾ ರಿಸರ್ಚ್ ಇನ್ಸ್ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಸಹಯೋಗದಲ್ಲಿ ಷರತ್ತುಗಳೊಂದಿಗೆ ಲಸಿಕೆ ಉತ್ಪಾದಿಸಲು ಸಿರಂ ಸಂಸ್ಥೆಗೆ ಡಿಸಿಜಿಐ ಅನುಮತಿ ನೀಡಿದೆ.

ಕೋವಿಶೀಲ್ಡ್ ಲಸಿಕೆ ಉತ್ಪಾದಿಸುತ್ತಿರುವ ಸಿರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಈಗ ಸ್ಪುಟ್ನಿಕ್ ಲಸಿಕೆಯನ್ನು ಕೂಡ ಉತ್ಪಾದಿಸಲಿದೆ. ಈಗಾಗಲೇ ಕೋವಿಶೀಲ್ಡ್, ಹೈದರಾಬಾದ್ ಭಾರತ್ ಬಯೋಟೆಕ್ ನ ಕೊವ್ಯಾಕ್ಸಿನ್ ಲಸಿಕೆಗಳು ಭಾರತದಲ್ಲಿ ತಯಾರಾಗುತ್ತಿದ್ದು, ಈಗ ಸ್ಪುಟ್ನಿಕ್ ವಿ ಲಸಿಕೆ ಕೂಡ ಉತ್ಪಾದನೆಯಾಗಲಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...