ನವದೆಹಲಿ: ಪುಣೆಯ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಅಭಿವೃದ್ಧಿಪಡಿಸಿದ ಕೊರೋನಾ ಲಸಿಕೆ ಕೋವಿಶೀಲ್ಡ್ ಪ್ರತಿ ಡೋಸ್ ಗೆ 200 ರೂ. ನಿಗದಿಪಡಿಸಲಾಗಿದೆ.
ಎರಡು ಲಸಿಕೆ ಕಂಪನಿಗಳೊಂದಿಗೆ ಖರೀದಿ ಒಪ್ಪಂದಕ್ಕೆ ಕೇಂದ್ರ ಸರ್ಕಾರಕ್ಕೆ ಸಹಿ ಹಾಕಿದೆ. ಪ್ರತಿ ಡೋಸ್ ಗೆ 200 ರೂಪಾಯಿ ದರ ನಿಗದಿ ಮಾಡಲಾಗಿದೆ ಎಂದು ಹೇಳಲಾಗಿದೆ.
ಹೈದರಾಬಾದ್ ನ ಭಾರತ್ ಬಯೋಟೆಕ್ ಕೊವ್ಯಾಕ್ಸಿನ್ ಲಸಿಕೆ ಅಭಿವೃದ್ಧಿಪಡಿಸಿದ್ದು, ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಕೊವಿಶೀಲ್ಡ್ ಲಸಿಕೆ ಅಭಿವೃದ್ಧಿಪಡಿಸಿದೆ. ಸೀರಮ್ ಇನ್ಸ್ಟಿಟ್ಯೂಟ್ ನಿಂದ ಆರಂಭಿಕವಾಗಿ ಒಂದು ಕೋಟಿ ಡೋಸ್ ಲಸಿಕೆ ಖರೀದಿಗೆ ಕೇಂದ್ರ ಸರ್ಕಾರ ಒಪ್ಪಂದ ಮಾಡಿಕೊಂಡಿದ್ದು ಇಂದು ರಾತ್ರಿ ಇಲ್ಲವೆ ನಾಳೆ ಬೆಳಗಿನಜಾವದಿಂದಲೇ ವಿವಿಧ ರಾಜ್ಯಗಳಿಗೆ ಲಸಿಕೆ ಪೂರೈಕೆ ಮಾಡಲಾಗುತ್ತದೆ. ವಿವಿಧ ರಾಜ್ಯಗಳಿಗೆ ಲಸಿಕೆ ಪೂರೈಕೆಯಾಗಲಿದ್ದು, ಈಗಾಗಲೇ ದಾಸ್ತಾನು ಮಾಡಲು ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.