ಪುಣೆ: ಕೊರೋನಾ ಸೋಂಕು ತಡೆಗೆ ಅಭಿವೃದ್ಧಿಪಡಿಸಲಾಗುತ್ತಿರುವ ಕೋವಿಶೀಲ್ಡ್ 4 ಕೋಟಿ ಡೋಸ್ ಲಸಿಕೆ ಈಗಾಗಲೇ ಸಿದ್ಧವಾಗಿದೆ.
ಬ್ರಿಟನ್ ಆಕ್ಸ್ ಫರ್ಡ್ ವಿಶ್ವವಿದ್ಯಾಲಯ, ಆಸ್ಟ್ರೋಜನಿಕಾ ಕಂಪನಿಯ ಕೋವಿಶೀಲ್ಡ್ ಲಸಿಕೆಯ ಮೂರನೇ ಮತ್ತು ಕೊನೆ ಹಂತದ ಪ್ರಯೋಗ ಭಾರತದಲ್ಲಿ ನಡೆಸಲು 1600 ಸೇವಕರನ್ನು ನೋಂದಣಿ ಮಾಡಿಕೊಳ್ಳಲಾಗಿದೆ. ಮೊದಲ ಮತ್ತು ಎರಡನೇ ಹಂತದಲ್ಲಿ ಲಸಿಕೆ ಯಶಸ್ವಿಯಾಗಿರುವುದು ಕಂಡುಬಂದಿದೆ.
ಹೀಗಾಗಿ ವಿಶ್ವಾಸದೊಂದಿಗೆ ಪುಣೆಯ ಸೇರಂ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ಕಂಪನಿಯಲ್ಲಿ 4 ಕೋಟಿ ಡೋಸ್ ಲಸಿಕೆಗಳನ್ನು ತಯಾರಿಸಲಾಗಿದೆ. ಮೂರನೇ ಹಂತದ ಪ್ರಯೋಗಕ್ಕಾಗಿ ನೊಂದಣಿ ಮಾಡಿಕೊಳ್ಳಲಾಗಿದ್ದು, ದೇಶದ 15 ಸ್ಥಳಗಳಲ್ಲಿ ಲಸಿಕೆಯ ಅಂತಿಮ ಹಂತದ ಪರೀಕ್ಷೆ ನಡೆಯಲಿದೆ. ಜನವರಿ ಒಳಗೆ ಲಸಿಕೆ ಬಿಡುಗಡೆಯಾಗಲಿದೆ ಎಂದು ಹೇಳಲಾಗಿದೆ.