
ಬೆಳಗಾವಿಯಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಡೆಸಲಾಗುವುದು. ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸುವ ಕುರಿತಂತೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸುವರ್ಣಸೌಧಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಚಳಿಗಾಲದ ಅಧಿವೇಶನವನ್ನು ವೆಬ್ ಕಾಸ್ಟಿಂಗ್ ಮೂಲಕ ನೇರ ಪ್ರಸಾರ ಮಾಡಲಾಗುವುದು. ನಾಳಿನ ಸಂಪುಟ ಸಭೆಯಲ್ಲಿ ಅಧಿವೇಶನದ ದಿನಾಂಕ ನಿಗದಿ ಮಾಡುವ ಸಾಧ್ಯತೆ ಇದೆ. ಸೋಮವಾರ ಸಭಾಪತಿ ಬಸವರಾಜ ಹೊರಟ್ಟಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನದ ಸಿದ್ಧತೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಲಿದ್ದಾರೆ ಎನ್ನಲಾಗಿದೆ.