ಬೆಂಗಳೂರು: ಇಂದಿನಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಡಿಸೆಂಬರ್ 15 ರ ವರೆಗೆ ಅಧಿವೇಶನ ನಡೆಯಲಿದ್ದು, ಗೋಹತ್ಯೆ ನಿಷೇಧ ಮಸೂದೆ ಮಂಡಿಸುವ ಸಾಧ್ಯತೆ ಇದೆ. ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಾಗುವುದು ಎಂದು ಹೇಳಲಾಗಿದೆ.
ಕೃಷಿ ಮಸೂದೆಯನ್ನು ಮರು ಮಂಡನೆ ಮಾಡಲಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಜಟಾಪಟಿ ನಡೆಯುವ ಸಾಧ್ಯತೆ ದಟ್ಟವಾಗಿದೆ. ಕಾರ್ಮಿಕ ತಿದ್ದುಪಡಿ ಕಾಯ್ದೆ, ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ ವಿಧೇಯಕಗಳ ಮರು ಮಂಡನೆಗೆ ಅವಕಾಶ ನೀಡದಿರಲು ಕಾಂಗ್ರೆಸ್ ಮುಂದಾಗಿದೆ ಎನ್ನಲಾಗಿದ್ದು, ಪ್ರತಿಪಕ್ಷಗಳನ್ನು ಸಮರ್ಥವಾಗಿ ಎದುರಿಸಲು ಆಡಳಿತಪಕ್ಷ ಕೂಡ ಸಜ್ಜಾಗಿದೆ.