ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಹಗರಣ ವಿಚಾರವನ್ನು ವಿಧಾನ ಮಂಡಲದಲ್ಲಿ ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ಮುಗಿಬೀಳಲು ಬಿಜೆಪಿ ಸಜ್ಜಾಗಿದೆ.
ಸರ್ಕಾರದ ಮೇಲೆ ಮುಗಿಬಿದ್ದು ತರಾಟೆಗೆ ತೆಗೆದುಕೊಳ್ಳಲು ಶಾಸಕರಿಗೆ ಕರೆ ನೀಡಲು ಬಿಜೆಪಿ ಕೋರ್ ಕಮಿಟಿ ಸಭೆ ತೀರ್ಮಾನಿಸಿದೆ. ಇದರೊಂದಿಗೆ ಮುಂದೆ ಬರುವ ಚುನಾವಣೆಗಳಿಗೆ ಸಿದ್ಧತೆಯನ್ನು ಚುರುಕುಗೊಳಿಸಲು ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಗುರುವಾರ ರಾಜ್ಯ ಕೋರ್ ಕಮಿಟಿ ಸಭೆ ನಡೆದಿದ್ದು, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ಮಾಜಿ ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ. ಸಿ.ಎನ್. ಅಶ್ವತ್ಥ್ ನಾರಾಯಣ, ಮಾಜಿ ಸಚಿವರಾದ ಬಿ. ಶ್ರೀರಾಮುಲು, ಸಿ.ಟಿ. ರವಿ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಭಾಗವಹಿಸಿದ್ದರು.
ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಮುಗಿಬೀಳಲು ಬಿಜೆಪಿ ಶಾಸಕರಿಗೆ ಕರೆ ನೀಡಲು ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.