ಬೆಂಗಳೂರು: ಜನವರಿ 28 ರಿಂದ ಫೆಬ್ರವರಿ 5 ರವರೆಗೆ ರಾಜ್ಯ ವಿಧಾನಮಂಡಲ ಜಂಟಿ ಅಧಿವೇಶನ ನಡೆಯಲಿದ್ದು, ಮಾರ್ಚ್ ನಲ್ಲಿ ಬಜೆಟ್ ಮಂಡನೆ ಮಾಡಲಾಗುವುದು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಭೆಯ ನಂತರ ಸಚಿವ ಜೆ.ಸಿ. ಮಧುಸ್ವಾಮಿ ಮಾಹಿತಿ ನೀಡಿದ್ದಾರೆ.
ವಿಧಾನಮಂಡಲ ಅಧಿವೇಶನದ ಮೊದಲ ದಿನ ರಾಜ್ಯಪಾಲರು ಭಾಷಣ ಮಾಡಲಿದ್ದು, ನಂತರ ಭಾಷಣದ ಮೇಲೆ ಚರ್ಚೆ ನಡೆಯಲಿದೆ. ಮಾರ್ಚ್ ನಲ್ಲಿ ಆಯವ್ಯಯ ಮಂಡಿಸಲು ತೀರ್ಮಾನಿಸಲಾಗಿದ್ದು, ಇನ್ನೂ ದಿನಾಂಕ ನಿಗದಿಯಾಗಿಲ್ಲ ಎಂದು ಹೇಳಿದ್ದಾರೆ.