ಬೆಂಗಳೂರು: ನಾಳೆಯಿಂದ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಮೊದಲ ದಿನ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ.
ಫೆಬ್ರವರಿ 25 ರವರೆಗೂ ಅಧಿವೇಶನ ನಡೆಯಲಿದೆ ಎಂದು ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, 10 ದಿನಗಳ ಕಾಲ ನಡೆಯುವ ವಿಧಾನಮಂಡಲ ಅಧಿವೇಶನ ಸಂಬಂಧ ಸದಸ್ಯರಿಂದ ಇದುವರೆಗೆ 2062 ಪ್ರಶ್ನೆಗಳು ಮತ್ತು ಸರ್ಕಾರದಿಂದ ಎರಡು ವಿಧೇಯಕ ಸ್ವೀಕಾರಗೊಂಡಿದೆ ಎಂದು ತಿಳಿಸಿದ್ದಾರೆ.
ಅಧಿವೇಶನದ ಮೊದಲ ದಿನ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದ್ದಾರೆ.
ರಾಜ್ಯಪಾಲರ ಭಾಷಣದ ನಂತರ ಮೃತರಾದ ವಿವಿಧ ಕ್ಷೇತ್ರಗಳ ಗಣ್ಯರಿಗೆ ಸಂತಾಪ ಸೂಚಿಸಲಾಗುವುದು. ಫೆ. 15 ರಂದು ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಸಂಬಂಧಿಸಿದಂತೆ ಚರ್ಚೆ ನಡೆಯಲಿದೆ.