
ಬೆಂಗಳೂರು: ಡಿಸೆಂಬರ್ 9 ಲೋಕ ಅದಾಲತ್ ಮೂಲಕ 25.14 ಲಕ್ಷ ಕೇಸ್ ಇತ್ಯರ್ಥಪಡಿಸಲಾಗಿದೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಮಾಹಿತಿ ನೀಡಲಾಗಿದೆ.
ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ.
ನ್ಯಾಯಾಲಯಗಳಲ್ಲಿ ಬಾಕಿ ಇದ್ದ 2.24 ಲಕ್ಷಕ್ಕೆ ಇತ್ಯರ್ಥಪಡಿಸಲಾಗಿದೆ.
22.90 ಲಕ್ಷ ವ್ಯಾಜ್ಯಪೂರ್ವ ಪ್ರಕರಣಗಳು ಇತ್ಯರ್ಥಗೊಂಡಿವೆ.
ಒಟ್ಟು 1569 ಕೋಟಿ ರೂ. ಪರಿಹಾರ ಮೊತ್ತದೊಂದಿಗೆ ಪ್ರಕರಣಗಳ ಇತ್ಯರ್ಥಗೊಳಿಸಲಾಗಿದೆ
1358 ವೈವಾಹಿಕ ಪ್ರಕರಣ ಇತ್ಯರ್ಥಗೊಂಡಿವೆ
ಸಂಧಾನದ ಮೂಲಕ 262 ದಂಪತಿಗಳನ್ನು ಒಟ್ಟುಗೂಡಿಸಲಾಗಿದೆ
3125 ವಿಭಾಗ ದಾವೆ ರಾಜಿ ಸಂಧಾನದ ಮೂಲಕ ಇತ್ಯರ್ಥಗೊಂಡಿವೆ
4031 ಅಪಘಾತ ಪ್ರಕರಣಗಳಲ್ಲಿ 209 ಕೋಟಿ ರೂ ಪರಿಹಾರ ನೀಡಲಾಗಿದೆ.
10513 ಚೆಕ್ ಬೌನ್ಸ್ ಪ್ರಕರಣಗಳನ್ನು ಮುಕ್ತಾಯಗೊಳಿಸಲಾಗಿದೆ
28 ರೇರಾ, 88 ಗ್ರಾಹಕರ ವ್ಯಾಜ್ಯಗಳು ಇತ್ಯರ್ಥವಾಗಿವೆ.