ನವದೆಹಲಿ: ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿರುವ 5 ರಾಜ್ಯಗಳಲ್ಲಿ ನಡೆಸಲಾದ ಸಮೀಕ್ಷೆ ರಾಜಕೀಯ ಲೆಕ್ಕಾಚಾರಗಳನ್ನು ಬದಲಿಸಿದೆ.
ಪಂಜಾಬ್ ನಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳಲಿದೆ. ಸರಳ ಬಹುಮತದೊಂದಿಗೆ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೇರಲಿದೆ. ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಅಧಿಕಾರ ಉಳಿಸಿಕೊಳ್ಳಲಿದ್ದಾರೆ.
ಉತ್ತರಪ್ರದೇಶ, ಗೋವಾ, ಮಣಿಪುರ ಮತ್ತು ಉತ್ತರಾಖಂಡ್ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಳ್ಳಲಿದೆ ಎನ್ನುವುದು ನಡೆಸಿದ ಎಬಿಪಿ ಮತ್ತು ಸಿ -ವೋಟರ್ ನಡೆಸಿದ ಸಮೀಕ್ಷೆಯಲ್ಲಿ ಗೊತ್ತಾಗಿದೆ.
ಉತ್ತರ ಪ್ರದೇಶದ ಒಟ್ಟು 403 ಸ್ಥಾನಗಳಲ್ಲಿ ಬಿಜೆಪಿ 259 -267, ಸಮಾಜವಾದಿ ಪಾರ್ಟಿ 109 -117, ಬಿಎಸ್ಪಿ 12 -16 ಕಾಂಗ್ರೆಸ್ 3 -7 ಹಾಗೂ ಇತರರು 6 -10 ಸ್ಥಾನ ಗಳಿಸಬಹುದಾಗಿದೆ.
ಪಂಜಾಬ್ ನಲ್ಲಿ ಒಟ್ಟು 117 ಸ್ಥಾನಗಳಲ್ಲಿ ಆಮ್ ಆದ್ಮಿ ಪಕ್ಷ 51 -57, ಕಾಂಗ್ರೆಸ್ 38 -46, ಅಕಾಲಿದಳ 16 -24 ಸ್ಥಾನ ಗಳಿಸುವ ನಿರೀಕ್ಷೆ ಇದೆ.
ಉತ್ತರಾಖಂಡ್ ದ 70 ಸ್ಥಾನಗಳಲ್ಲಿ ಬಿಜೆಪಿ 44 -48, ಕಾಂಗ್ರೆಸ್ 19 -23 ಹಾಗೂ ಆಮ್ ಆದ್ಮಿ ಪಕ್ಷ 4, ಇತರರು 2 ಸ್ಥಾನಗಳಲ್ಲಿ ಜಯ ಗಳಿಸುವ ನಿರೀಕ್ಷೆ ಇದೆ.
ಗೋವಾದ 40 ಸ್ಥಾನಗಳಲ್ಲಿ ಆಮ್ ಆದ್ಮಿ ಪಕ್ಷ 4 -8, ಬಿಜೆಪಿ 22 -26, ಕಾಂಗ್ರೆಸ್ 3 -7, ಇತರರು 3 – 7 ಸ್ಥಾನಗಳಲ್ಲಿ ಜಯ ಗಳಿಸುವ ನಿರೀಕ್ಷೆ ಇದೆ.
ಮಣಿಪುರದ ಒಟ್ಟು 60 ಸ್ಥಾನಗಳಲ್ಲಿ ಬಿಜೆಪಿ 32 – 36, ಕಾಂಗ್ರೆಸ್ 18 – 22, ಎನ್.ಪಿ.ಎಲ್. 2 -6 ಹಾಗೂ ಇತರರು 4 ಸ್ಥಾನಗಳಲ್ಲಿ ಜಯ ಗಳಿಸುವ ಸಾಧ್ಯತೆ ಇದೆ.
2017 ರಲ್ಲಿ ಉತ್ತರಪ್ರದೇಶದಲ್ಲಿ ಬಿಜೆಪಿ 312 ಕ್ಷೇತ್ರಗಳಲ್ಲಿ ಜಯಗಳಿಸಿದ್ದು, ಮುಂದಿನ ಚುನಾವಣೆಯಲ್ಲಿ ಅಷ್ಟು ಸ್ಥಾನಗಳನ್ನು ಗಳಿಸುವುದಿಲ್ಲ. ಆದರೂ ಅಧಿಕಾರದಲ್ಲಿ ಮುಂದುವರೆಯಲಿದೆ ಎಂದು ಎಬಿಪಿ, ಸಿ -ವೋಟರ್ ನಡೆಸಿದ ಸಮೀಕ್ಷೆಯಲ್ಲಿ ತಿಳಿದು ಬಂದಿದೆ.