ಬೆಂಗಳೂರು: ರಾಜ್ಯದಲ್ಲಿ ರೂಪಾಂತರಿ ವೈರಸ್ ಆತಂಕ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹೈರಿಸ್ಕ್ ದೇಶಗಳಿಂದ ಬರುವ ಪ್ರಯಾಣಿಕರಿಗೆ ಕ್ವಾರಂಟೈನ್ ಕಡ್ಡಾಯ ಮಾಡಲಾಗಿದೆ.
ಕೊರೊನಾ ಒಮಿಕ್ರಾನ್ ರೂಪಾಂತರಿ BF.7 ಭೀತಿ ಹಿನ್ನೆಲೆಯಲ್ಲಿ ಹೈರಿಸ್ಕ್ ದೇಶಗಳಿಂದ ಬೆಂಗಳೂರಿಗೆ ಆಗಮಿಸುವ ಪ್ರಯಾಣಿಕರಿಗೆ 7 ದಿನ ಕಡ್ಡಾಯ ಕ್ವಾರಂಟೈನ್ ಘೋಷಿಸಲಾಗಿದೆ.
ಹಾಂಗ್ ಕಾಂಗ್, ಸಿಂಗಾಪುರ, ಚೀನಾ, ಜಪಾನ್, ಥೈಲ್ಯಾಂಡ್, ದಕ್ಷಿಣ ಕೊರಿಯಾ ಸೇರಿದಂತೆ ಹೈರಿಸ್ಕ್ ದೇಶದಿಂದ ಬರುವ ಪ್ರಯಾಣಿಕರಿಗೆ 7 ದಿನ ಕ್ವಾರಂಟೈನ್ ಮಾಡಲಾಗುತ್ತಿದೆ. ಕ್ವಾರಂಟೈನ್ ಗೆ ಒಳಪಡುವವರು ಹೋಟೆಲ್ ನಲ್ಲಿ ಉಳಿಯುವ ಪ್ರಯಾಣಿಕರು ತಾವೇ ವೆಚ್ಚ ಭರಿಸಬೇಕು. ಮನೆಯಲ್ಲಿ ಕ್ವಾರಂಟೈನ್ ಆಗುವವರ ಮೇಲೆ ಬಿಬಿಎಂಪಿ ನಿಗಾ ವಹಿಸಲಿದೆ. ಟೆಸ್ಟ್ ವೇಳೆ ಕೋವಿಡ್ ದೃಢಪಟ್ಟರೆ ಹೋಟೆಲ್ ಕ್ವಾರಂಟೈನ್ ಕಡ್ಡಾಯ. ಜಿನೋಮಿಕ್ ಸಿಕ್ವೆನ್ಸ್ ಕಡ್ಡಾಯ ಮಾಡಲು ಬಿಬಿಎಂಪಿ ನಿರ್ಧರಿಸಿದೆ.