alex Certify ಯುಗಾದಿ ದಿನವೇ ಘೋರ ದುರಂತ: ದೇವರ ದರ್ಶನಕ್ಕೆ ಹೊರಟಿದ್ದ 7 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯುಗಾದಿ ದಿನವೇ ಘೋರ ದುರಂತ: ದೇವರ ದರ್ಶನಕ್ಕೆ ಹೊರಟಿದ್ದ 7 ಮಂದಿ ಸಾವು

ಚೆನ್ನೈ: ತಮಿಳುನಾಡಿನ ತಿರುಪತ್ತೂರಿನಲ್ಲಿ ಟ್ರಕ್ ಕಣಿವೆಗೆ ಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 14 ಮಂದಿ ಗಾಯಗೊಂಡಿದ್ದಾರೆ.

ತಿರುಪತ್ತೂರ್ ಜಿಲ್ಲೆಯ ಸೆಂಬರೈ ಗ್ರಾಮದ ಬೆಟ್ಟದ ಮೇಲಿರುವ ದೇವಸ್ಥಾನಕ್ಕೆ ಪ್ರಯಾಣಿಕರು ತೆರಳುತ್ತಿದ್ದರು. ಈ ಸಂದರ್ಭದಲ್ಲಿ ನಿಯಂತ್ರಣ ತಪ್ಪಿದ ಪಿಕ್ ಅಪ್ ಟ್ರಕ್ ಕಣಿವೆಗೆ ಬಿದ್ದಿದ್ದರಿಂದ 7 ಜನ ಸಾವನ್ನಪ್ಪಿದ್ದಾರೆ ಎಂದು ತಮಿಳುನಾಡು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ,

ಅಪಘಾತಕ್ಕೆ ಕಾರಣವಾದ ಘಾಟ್ ರಸ್ತೆಯಲ್ಲಿ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡಿದ್ದಾನೆ. ಹೆಚ್ಚಿನ ತನಿಖೆಗಾಗಿ ಅಧಿಕಾರಿಗಳು ಸ್ಥಳಕ್ಕೆ ತೆರಳಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...