ಲಂಡನ್: ಆಸ್ಟ್ರಾಜೆನಿಕಾ – ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಜಂಟಿಯಾಗಿ ಸಂಶೋಧನೆ ನಡೆಸಿ ಅಭಿವೃದ್ಧಿಪಡಿಸಿದ ಕೊರೋನಾ ನಿಯಂತ್ರಣ ಲಸಿಕೆ ಪಡೆದ 7 ಮಂದಿ ಸಾವನ್ನಪ್ಪಿದ್ದಾರೆ. 30 ಜನರಲ್ಲಿ ರಕ್ತ ಹೆಪ್ಪುಗಟ್ಟಿದೆ.
ಈ ಲಸಿಕೆಯನ್ನು ಪಡೆದುಕೊಂಡ ಹಲವರಲ್ಲಿ ವ್ಯತಿರಿಕ್ತ ಪರಿಣಾಮ ಉಂಟಾಗಿದೆ. ಬ್ರಿಟನ್ ನಲ್ಲಿ ಆಸ್ಟ್ರಾಜೆನಿಕಾ, ಆಕ್ಸ್ ಫರ್ಡ್ ನ ಕೋವಿಡ್ ಲಸಿಕೆ ಪಡೆದ 30 ಮಂದಿಯಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಕಂಡುಬಂದಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ.
ಮಾರ್ಚ್ 24 ರವರೆಗೆ ಬ್ರಿಟನ್ ನಲ್ಲಿ ಆಸ್ಟ್ರಾಜೆನಿಕಾ ಕೋವಿಡ್-19 ಲಸಿಕೆ ಪಡೆದುಕೊಂಡ 30 ಜನರಲ್ಲಿ ರಕ್ತ ಹೆಪ್ಪುಗಟ್ಟಿದೆ. ಇವರಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ. ಬ್ರಿಟನ್ ನಲ್ಲಿ 18 ಮಿಲಿಯನ್ ಆಸ್ಟ್ರಾಜೆನೆಕಾ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದ್ದು, ಅಪರೂಪದ ರಕ್ತ ಹೆಪ್ಪುಗಟ್ಟುವಿಕೆ 30 ಪ್ರಕರಣ ಕಂಡುಬಂದಿದೆ ಎಂದು ಔಷಧ ನಿಯಂತ್ರಕ ಸಂಸ್ಥೆ ಈ ಬಗ್ಗೆ ಮಾಹಿತಿ ಹಂಚಿಕೊಂಡಿದೆ. 7 ಮಂದಿ ಸಾವನ್ನಪ್ಪಿದ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಯುರೋಪಿಯನ್ ಮೆಡಿಕಲ್ ಏಜೆನ್ಸಿ ಆಸ್ಟ್ರಾಜೆನಿಕಾ ಲಸಿಕೆ ಸುರಕ್ಷಿತ ಎಂದು ಹೇಳಿದ್ದು, ಲಸಿಕೆ ನೀಡಿಕೆ ಮುಂದುವರೆದಿದೆ. ಬ್ರಿಟನ್ ನಲ್ಲಿ ಇಂತಹ ಬೆಳವಣಿಗೆ ನಡೆದಿದೆ. ಜರ್ಮನಿ, ಫ್ರಾನ್ಸ್, ಕೆನಡಾ, ನೆದರ್ ಲ್ಯಾಂಡ್ ನಲ್ಲೂ ಇಂತಹ ರಕ್ತ ಹೆಪ್ಪುಗಟ್ಟುವಿಕೆ ಪ್ರಕರಣ ದಾಖಲಾಗಿವೆ.