
ಹೈದರಾಬಾದ್: ಹೋಟೆಲ್ ನಲ್ಲಿ ಅಗ್ನಿ ಅವಘಡದಿಂದ 7 ಜನರು ಸಾವನ್ನಪ್ಪಿದ ಘಟನೆ ಹೈದರಾಬಾದ್ ನ ಸಿಕಂದರಾಬಾದ್ ನಲ್ಲಿ ನಡೆದಿದೆ.
ಅಗ್ನಿದುರಂತದಲ್ಲಿ ಮಹಿಳೆ ಸೇರಿದಂತೆ 7 ಜನ ಸಾವನ್ನಪ್ಪಿದ್ದಾರೆ. 10 ಜನರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಕಂದರಾಬಾದ್ ನ ರೂಬಿ ಹೋಟೇಲ್ ನಲ್ಲಿ ಅವಘಡ ಸಂಭವಿಸಿದೆ. ಕಟ್ಟಡದ ಗ್ರೌಂಡ್ ಫ್ಲೋರ್ ನಲ್ಲಿದ್ದ ಎಲೆಕ್ಟ್ರಿಕ್ ವೆಹಿಕಲ್ ಶೋರೂಮ್ ನಲ್ಲಿ ಸ್ಪೋಟ ಸಂಭವಿಸಿದೆ.
ರೂಬಿ ಎಲೆಕ್ಟ್ರಿಕಲ್ ವೆಹಿಕಲ್ ಶೋರೂಮ್ ನಲ್ಲಿ ಬ್ಯಾಟರಿ ಸ್ಪೋಟಗೊಂಡು ಇಡೀ ಕಟ್ಟಡಕ್ಕೆ ಬೆಂಕಿ ವ್ಯಾಪಿಸಿದೆ. ಹೋಟೆಲ್ ನಲ್ಲಿ 25 ರಿಂದ 30 ಪ್ರವಾಸಿಗರು ತಂಗಿದ್ದ ಬಗ್ಗೆ ಮಾಹಿತಿ ಗೊತ್ತಾಗಿದ್ದು, ಇವರಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ. ಹಲವರಿಗೆ ಗಂಭೀರ ಗಾಯಗಳಾಗಿವೆ. ರಕ್ಷಣಾ ಸಿಬ್ಬಂದಿ ಹೋಟೆಲ್ ನಿಂದ ಹಲವರನ್ನು ರಕ್ಷಿಸಿದ್ದಾರೆ. ಎರಡು ಅಗ್ರಿಶಾಮಕ ವಾಹನಗಳಿಂದ ಬೆಂಕಿನಂದಿಸುವ ಕಾರ್ಯಾಚರಣೆ ನಡೆದಿದೆ.