ನವದೆಹಲಿ: ಉದ್ಯೋಗಕ್ಕಾಗಿ ರಷ್ಯಾಕ್ಕೆ ಹೋಗಿ ಸೇನೆಯಲ್ಲಿ ಸಿಲುಕಿರುವ ಕನ್ನಡಿಗರು ಸೇರಿದಂತೆ ಭಾರತೀಯರ ಬಿಡುಗಡೆ ಮಾಡಲಾಗಿದೆ.
ರಷ್ಯಾ ಸೇನೆಯಲ್ಲಿ ಸಹಾಯಕರಾಗಿ ನೇಮಕವಾಗಿದ್ದ ಭಾರತೀಯರನ್ನು ಬಿಡುಗಡೆ ಮಾಡಲಾಗುತ್ತಿದ್ದು, ರಷ್ಯಾ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ನೇಮಕವಾದ ಭಾರತೀಯರನ್ನು ಬಿಡುಗಡೆ ಮಾಡುವಂತೆ ತಿಳಿಸಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ.
ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಪ್ರತಿಯೊಬ್ಬ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ಸಚಿವಾಲಯ ಬದ್ಧವಾಗಿದೆ. ರಷ್ಯಾ ಸೇನೆಯಿಂದ ಭಾರತೀಯರನ್ನು ಶೀಘ್ರವಾಗಿ ಬಿಡುಗಡೆ ಮಾಡಿಸುವುದು ಆದ್ಯತೆಯಾಗಿದೆ ಎಂದು ತಿಳಿಸಿದ್ದಾರೆ.
ರಷ್ಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಂಬಂಧಿತ ಇಲಾಖೆಗಳೊಂದಿಗೆ ಮಾತುಕತೆ ನಡೆಸಿದ್ದು, ಸಚಿವಾಲಯ ಗಮನಕ್ಕೆ ತಂದ ಪ್ರಕರಣಗಳನ್ನು ನವದೆಹಲಿಯಲ್ಲಿರುವ ರಷ್ಯಾ ರಾಯಭಾರ ಕಚೇರಿಗೆ ತಿಳಿಸಲಾಗಿದೆ. ಭಾರತೀಯ ನಾಗರೀಕರನ್ನು ಶೀಘ್ರ ಬಿಡುಗಡೆ ಮಾಡಲು ಸಚಿವಾಲಯ ಮಾಸ್ಕೋದೊಂದಿಗೆ ಸಂಪರ್ಕದಲ್ಲಿದೆ ಎಂದು ತಿಳಿಸಿದ್ದಾರೆ.
ಭದ್ರತಾ ಕೆಲಸಕ್ಕೆ ರಷ್ಯಾಕ್ಕೆ ಕೆರಳಿದ್ದ ಕಲಬುರಗಿ ಮೂಲದ ಮೂವರು ಕನ್ನಡಿಗರು ಸೇರಿದಂತೆ ಹಲವು ಭಾರತೀಯರನ್ನು ರಷ್ಯಾ ಸೇನೆಯಲ್ಲಿ ಬಲವಂತವಾಗಿ ಬಳಸಿಕೊಳ್ಳಲಾಗುತ್ತಿದೆ. ಸಂತ್ರಸ್ತ ಭಾರತೀಯರು ವಿಡಿಯೋ ಹಂಚಿಕೊಳ್ಳುವ ಮೂಲಕ ರಕ್ಷಣೆಗೆ ಮನವಿ ಮಾಡಿದ್ದರು.