ಲಖ್ನೋ: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸುವುದು ಅತ್ಯಾಚಾರಕ್ಕೆ ಸಮ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಮದುವೆಯ ಸುಳ್ಳು ಭರವಸೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸುವ ಪ್ರಕರಣಗಳ ಬಗ್ಗೆ ಪರಿಶೀಲನೆಗೆ ನಿರ್ದಿಷ್ಟವಾದ ಕಾನೂನು ಅಗತ್ಯವಿದೆ ಎಂದು ಹೈಕೋರ್ಟ್ ತಿಳಿಸಿದೆ. ಮದುವೆಯಾಗುವುದಾಗಿ ಮಹಿಳಾ ಪೊಲೀಸ್ ಗೆ ನಂಬಿಸಿದ್ದ ಆರೋಪಿ ಲೈಂಗಿಕ ಸಂಪರ್ಕ ಬೆಳೆಸಿದ್ದ. ನಂತರ ಮದುವೆಯಾಗಲು ನಿರಾಕರಿಸಿದ್ದ. ಮಹಿಳಾ ಪೊಲೀಸ್ ಕಾನ್ಪುರದಲ್ಲಿ ದೂರು ದಾಖಲಿಸಿದ್ದಳು. ಈಗ ಬಂಧನದಲ್ಲಿರುವ ಆರೋಪಿ ಜಾಮೀನು ಅರ್ಜಿ ಸಲ್ಲಿಸಿದ್ದು, ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಪ್ರದೀಪ್ ಕುಮಾರ್ ಶ್ರೀವಾಸ್ತವ ನೇತೃತ್ವದ ಪೀಠ ಜಾಮೀನು ನೀಡಲು ನಿರಾಕರಿಸಿದೆ.
ಮದುವೆಯ ನೆಪದಲ್ಲಿ ದೈಹಿಕ ಸಂಪರ್ಕ ಬೆಳೆಸುವುದು ಅತ್ಯಾಚಾರಕ್ಕೆ ಸಮ. ಇಂತಹ ಪ್ರಕರಣಗಳ ನಿರ್ವಹಣೆಗೆ ಕಾನೂನು ರೂಪಿಸಬೇಕಿದೆ ಎಂದು ಹೇಳಲಾಗಿದೆ.