alex Certify ಮದುವೆಯ ಹೆಸರಲ್ಲಿ ಲೈಂಗಿಕ ಕ್ರಿಯೆ ಅತ್ಯಾಚಾರಕ್ಕೆ ಸಮ: ಅಲಹಾಬಾದ್ ಹೈಕೋರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆಯ ಹೆಸರಲ್ಲಿ ಲೈಂಗಿಕ ಕ್ರಿಯೆ ಅತ್ಯಾಚಾರಕ್ಕೆ ಸಮ: ಅಲಹಾಬಾದ್ ಹೈಕೋರ್ಟ್

ಲಖ್ನೋ: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸುವುದು ಅತ್ಯಾಚಾರಕ್ಕೆ ಸಮ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಮದುವೆಯ ಸುಳ್ಳು ಭರವಸೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸುವ ಪ್ರಕರಣಗಳ ಬಗ್ಗೆ ಪರಿಶೀಲನೆಗೆ ನಿರ್ದಿಷ್ಟವಾದ ಕಾನೂನು ಅಗತ್ಯವಿದೆ ಎಂದು ಹೈಕೋರ್ಟ್ ತಿಳಿಸಿದೆ. ಮದುವೆಯಾಗುವುದಾಗಿ ಮಹಿಳಾ ಪೊಲೀಸ್ ಗೆ ನಂಬಿಸಿದ್ದ ಆರೋಪಿ ಲೈಂಗಿಕ ಸಂಪರ್ಕ ಬೆಳೆಸಿದ್ದ. ನಂತರ ಮದುವೆಯಾಗಲು ನಿರಾಕರಿಸಿದ್ದ. ಮಹಿಳಾ ಪೊಲೀಸ್ ಕಾನ್ಪುರದಲ್ಲಿ ದೂರು ದಾಖಲಿಸಿದ್ದಳು. ಈಗ ಬಂಧನದಲ್ಲಿರುವ ಆರೋಪಿ ಜಾಮೀನು ಅರ್ಜಿ ಸಲ್ಲಿಸಿದ್ದು, ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಪ್ರದೀಪ್ ಕುಮಾರ್ ಶ್ರೀವಾಸ್ತವ ನೇತೃತ್ವದ ಪೀಠ ಜಾಮೀನು ನೀಡಲು ನಿರಾಕರಿಸಿದೆ.

ಮದುವೆಯ ನೆಪದಲ್ಲಿ ದೈಹಿಕ ಸಂಪರ್ಕ ಬೆಳೆಸುವುದು ಅತ್ಯಾಚಾರಕ್ಕೆ ಸಮ. ಇಂತಹ ಪ್ರಕರಣಗಳ ನಿರ್ವಹಣೆಗೆ ಕಾನೂನು ರೂಪಿಸಬೇಕಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...