ಬೆಂಗಳೂರು: 13 ವರ್ಷದ ಮಾನಸಿಕ ಅಸ್ವಸ್ಥೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯ ಕ್ರಿಮಿನಲ್ ವಿಚಾರಣೆ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.
ಪೋಕ್ಸೋ ಮತ್ತು ಐಪಿಸಿ ಸೆಕ್ಷನ್ ಗಳಡಿ ತನ್ನ ವಿರುದ್ಧ ನಡೆಯುತ್ತಿರುವ ಕ್ರಿಮಿನಲ್ ವಿಚಾರಣೆ ರದ್ದು ಕೋರಿ ತುಮಕೂರು ಜಿಲ್ಲೆಯ ಕೃಷ್ಣಪ್ಪ(48) ಎಂಬುವರು ಹೈಕೋರ್ಟ್ ಮೊರೆ ಹೋಗಿದ್ದರು. ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ಮುಂದಿನ ಮೂರು ತಿಂಗಳಲ್ಲಿ ವಿಚಾರಣೆ ಪೂರ್ಣಗೊಳಿಸಲು ಸೂಚಿಸಲಾಗಿದೆ.