ಹುಬ್ಬಳ್ಳಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪಿಯನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಪ್ರಕರಣ ಸಂಬಂಧ 49 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ.
ಫೆ.18ರಂದು ಸಂತ್ರಸ್ತೆ ಕೇಶ್ವಾಪುರ ಠಾಣೆಯಲ್ಲಿ ದೂರು ದಾಖಲಿಸಿದ್ದರು. 2023ರಲ್ಲಿ ಆರೋಪಿ ತನ್ನ ತಂದೆ-ತಾಯಿಯನ್ನು ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿ ಬಲವಂತವಾಗಿ ಮನೆಗೆ ಕರೆಸಿಕೊಂಡು ತನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ದೂರು ನೀಡಿದ್ದರು.
ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಇನ್ನೂ ಹಲವರಿಗೆ ಮೋಸ ಮಾಡಿರುವುದು ತನಿಖೆ ವೇಳೆ ತಿಳಿದುಬಂದಿದೆ. ಆತನಿಂದ ಮೋಸ ಹೋದವರು ಸಂಬಂಧಪಟ್ಟ ಠಾಣೆಯಲ್ಲಿ ದೂರು ನೀಡಿದಲ್ಲಿ ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.