alex Certify ಟೆಕ್ಕಿಗೆ ಲೈಂಗಿಕ ಕಿರುಕುಳ: ಫುಡ್ ಡೆಲಿವರಿ ಬಾಯ್ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟೆಕ್ಕಿಗೆ ಲೈಂಗಿಕ ಕಿರುಕುಳ: ಫುಡ್ ಡೆಲಿವರಿ ಬಾಯ್ ಅರೆಸ್ಟ್

ಬೆಂಗಳೂರು: ಫುಡ್ ಆರ್ಡರ್ ಕೊಡಲು ಬಂದಿದ್ದ ಡೆಲಿವರಿ ಬಾಯ್ ಮಹಿಳಾ ಟೆಕ್ಕಿಯ ಕೈಹಿಡಿದು ಎಳೆದಾಡಿ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದ್ದು, ಹೆಚ್ಎಎಲ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಆಕಾಶ್ ಬಂಧಿತ ಆರೋಪಿ. ಬೆಂಗಳೂರಿನಲ್ಲಿ ಅನೇಕ ವರ್ಷಗಳಿಂದ ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಆಕಾಶ್ ಐಟಿಪಿಎಲ್ ಸಮೀಪ ಕುಂದಲಹಳ್ಳಿಯಲ್ಲಿ ವಾಸವಾಗಿದ್ದಾನೆ. ಉತ್ತರ ಭಾರತ ಮೂಲದ ಸಂತ್ರಸ್ತೆ ಬೆಂಗಳೂರಿನ ಸಾಫ್ಟ್ವೇರ್ ಕಂಪನಿಯಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದು, ಎಇಸಿಎಲ್ ಲೇಔಟ್ ನಲ್ಲಿ ನೆಲೆಸಿದ್ದಾರೆ.

ಮಾರ್ಚ್ 17ರಂದು ಸಂಜೆ ಆನ್ಲೈನ್ ನಲ್ಲಿ ಫುಡ್ ಆರ್ಡರ್ ಮಾಡಿದ ಅವರ ಮನೆಗೆ ಫುಡ್ ಡೆಲಿವರಿ ಮಾಡಲು ಬಂದಿದ್ದ ಆಕಾಶ್ ತುರ್ತಾಗಿ ಶೌಚಾಲಯ ಬಳಸುವುದಾಗಿ ಹೇಳಿದ್ದಾನೆ. ಅದಕ್ಕೆ ಸಂತ್ರಸ್ತೆ ಸಮ್ಮತಿಸಿದ್ದಾರೆ. ಶೌಚಾಲಯದಿಂದ ಹೊರಬಂದ ಬಳಿಕ ಕುಡಿಯಲು ನೀರು ಕೊಡುವಂತೆ ಕೇಳಿದ್ದಾನೆ. ನೀರು ತರಲು ಅಡುಗೆ ಕೋಣೆಗೆ ಹೋಗುವಾಗ ಕೈ ಹಿಡಿದು ಎಳೆದು ಅನುಷಚಿತವಾಗಿ ವರ್ತಿಸಿದ್ದಾನೆ. ಗಾಬರಿಯಾದ ಸಂತ್ರಸ್ತೆ ಆತನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಬಳಿಕ ಆತ ಅಲ್ಲಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದು, ಮಾಹಿತಿ ಕಲೆಹಾಕಿದ ಪೊಲೀಸರು ಆಕಾಶ್ ನನ್ನು ಬಂಧಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...