
ಶಿವಮೊಗ್ಗ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ 27 ವರ್ಷದ ಅಪರಾಧಿಗೆ ನ್ಯಾಯಾಲಯ, 20 ವರ್ಷ ಕಠಿಣ ಜೈಲು ಶಿಕ್ಷೆ, 1 ಲಕ್ಷದ 50 ಸಾವಿರ ರೂಪಾಯಿ ದಂಡ ವಿಧಿಸಿದೆ.
ಒಂದು ವೇಳೆ ಅಪರಾಧಿ ದಂಡ ಕಟ್ಟಲು ವಿಫಲನಾದರೆ ಹೆಚ್ಚುವರಿ 9 ತಿಂಗಳು ಸಾದಾ ಜೈಲು ಶಿಕ್ಷೆಗೆ ಆತನನ್ನು ನೀಡುವಂತೆ ಪೊಲೀಸರಿಗೆ ಕೋರ್ಟ್ ಸೂಚಿಸಿದೆ.
2022ರಲ್ಲಿ ಅಪರಾಧಿ ಯುವಕ 14 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಸಂಬಂಧ ಬಾಲಕಿ ತಂದೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.